ಪಶ್ಚಿಮ ಏಷ್ಯಾದಲ್ಲಿ ಇರುವ ಪರಿಸ್ಥಿತಿ ಆತಂಕ ಮೂಡಿಸುವಂತಿದೆ. ಜಾಗತಿಕವಾಗಿ ಇದರ ಪರಿಣಾಮ ಆಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಲೋಕಸಭೆಯಲ್ಲಿ ಈ ಪರಿಸ್ಥಿತಿ ಬಗ್ಗೆ ಮಾತನಾಡಿದ ನರೇಂದ್ರ ಮೋದಿ, ಜನರಿಗೆ ತೊಂದರೆ ಆಗದೇ ಇರುವಂತೆ ನೋಡಿಕೊಳ್ಳುವುದು ಸರ್ಕಾರಕ್ಕೆ ಆದ್ಯತೆ ಆಗಿದೆ ಎಂದು ಅವರು ಹೇಳಿದ್ದಾರೆ.
ನವದೆಹಲಿ, ಮಾರ್ಚ್ 23: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ಜಾಗತಿಕವಾಗಿ ಆಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಆತಂಕ ವ್ಯಕ್ತಪಡಿಸಿದ್ದಾರೆ. ಸಂಸತ್ನಲ್ಲಿ ಇಂದು ಪ್ರಧಾನಿಗಳು ಪಶ್ಚಿಮ ಏಷ್ಯಾ ಯುದ್ಧ ಹಾಗೂ ತೈಲ ಬಿಕ್ಕಟ್ಟಿನ ಕುರಿತು ಮಾತನಾಡುತ್ತಾ, ತಮ್ಮ ಸರ್ಕಾರ ಈ ಬಿಕ್ಕಟ್ಟು ಎದುರಿಸಲು ಮಾಡುತ್ತಿರುವ ಪ್ರಯತ್ನಗಳನ್ನು ವಿವರಿಸಿದ್ದಾರೆ. ಹಾರ್ಮುಜ್ ಸ್ಟ್ರೇಟ್ಗೆ (Hormuz Strait) ತಡೆಯಾಗಿರುವುದರಿಂದ ತೈಲ ಮತ್ತು ಅನಿಲ ಪೂರೈಕೆಯನ್ನು ಸಾಧ್ಯವಿರುವೆಡೆಯೆಲ್ಲಾ ಪಡೆಯಲಾಗುತ್ತಿದೆ ಎಂದು ಹೇಳಿದ್ದಾರೆ.
















Leave a Reply