ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾಕ್ಕೆ 24ನೇ ರಾಷ್ಟ್ರೀಯ ಅಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆಯಾದ ರಾಜ್ಯದ ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವರಾದ ಈಶ್ವರ್ ಬಿ. ಖಂಡ್ರೆ ಅವರ ತವರು ಜಿಲ್ಲೆ ಬೀದರ್‌ನಲ್ಲಿ ಬೃಹತ್ ಅಭಿನಂದನಾ ಸಮಾರಂಭವು ಅಭೂತಪೂರ್ವ ನಡೆಯಿತು. ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದ ಅಖಿಲ ಭಾರತ ವೀರಶೈವ ಮಹಾಸಭಾ ಯುವ ಘಟಕದ ರಾಜ್ಯ ಪ್ರಧಾನಕಾರ್ಯದರ್ಶಿ ಅವಿನಾಶ್ ಜಗನ್ನಾಥ್ ಅವರು ಯಾದಗಿರಿ ಜಿಲ್ಲೆಯ ಸಮಸ್ತ ವೀರಶೈವ ಲಿಂಗಾಯತ ಸಮುದಾಯದ ಪರವಾಗಿ ನೂತನ ರಾಷ್ಟ್ರೀಯ ಅಧ್ಯಕ್ಷ ಈಶ್ವರ ಖಂಡ್ರೆಯವರಿಗೆ ಒಂದು ಕೆ.ಜಿ ತೂಕದ ಬೆಳ್ಳಿ ಗದೆಯನ್ನು ಉಡುಗೊರೆಯಾಗಿ ລ໖, ಆತ್ಮೀಯವಾಗಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ವೀರಶೈವ ಮಹಾಸಭಾ ರಾಷ್ಟ್ರೀಯ ಯುವ ಅಧ್ಯಕ್ಷರಾದ ವೆಂಕಟರೆಡ್ಡಿ ಪಾಟೀಲ್ ಅಶೋಕ ಮೂಲಿಕೇರಿ ವಿನೋದ್ ಗಂಗಾ , ಪ್ರಭಾಕರ ಗುಳಗಿ ಸಂಗಮೇಶ್ ಗೂಳಗಿ ಗಣೇಶ್ ಗುತೆದಾರ್ ಮತ್ತಿತರರು ಇದ್ದರು.
ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಈಶ್ವರ ಖಂಡ್ರೆಯವರಿಗೆ ಬೆಳ್ಳಿಗದೆ ನೀಡಿ ಸನ್ಮಾನಿಸಿದ ಅವಿನಾಶ ಜಗನ್ನಾಥ..













Leave a Reply