[ad_1]

ಹಾಸನ: ರಸ್ತೆ ದಾಟುವ ವೇಳೆ ಕಾರು ಡಿಕ್ಕಿಯಾಗಿ (Accident) ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಹೊಳೆನರಸೀಪುರ (Holenarasipur) ತಾಲೂಕಿನ ಕಾಮಸಮುದ್ರದ (Kamasamudra) ಬಳಿಯ ರಾಷ್ಟ್ರೀಯ ಹೆದ್ದಾರಿ 373ರಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿಯನ್ನು (Student) ಚಿರಂತ್ (16) ಎಂದು ಗುರುತಿಸಲಾಗಿದೆ. ಪರೀಕ್ಷೆ ಮುಗಿಸಿ ಬಸ್‍ನಲ್ಲಿ ಊರಿಗೆ ಬಂದಿದ್ದ ಬಾಲಕ ರಸ್ತೆ ದಾಟುತ್ತಿದ್ದ. ಈ ವೇಳೆ ವೇಗವಾಗಿ ಬಂದ ಕಾರು ಬಾಲಕನಿಗೆ ಡಿಕ್ಕಿಯಾಗಿದೆ. ಪರಿಣಾಮ ಬಾಲಕ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ – ಭಾಗಶಃ ಸುಟ್ಟು ಕರಕಲು
ಅತಿಯಾದ ವೇಗ ಹಾಗೂ ಕಾರು ಚಾಲಕನ ಅಜಾಗರೂಕತೆಯಿಂದ ಅಪಘಾತ ನಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ಆರೋಪಿಸಿದ್ದಾರೆ. ಹೊಳೆನರಸೀಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ನಡೆದಿದೆ. ಇದನ್ನೂ ಓದಿ: ಮೂಡಿಗೆರೆ, ಚಿಕ್ಕಮಗಳೂರಲ್ಲಿ ಭಾರೀ ಗಾಳಿ, ಮಳೆ – ವಾಹನ ಸವಾರರ ಪರದಾಟ
[ad_2]
Source link publictv.in

















Leave a Reply