Advertisement

Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ

[ad_1]

Rishabh Shetty

– ಮೂರು ಪ್ರಶಸ್ತಿಗೆ ಮುತ್ತಿಕ್ಕಿದ್ದ ಡಿವೈನ್ ಸ್ಟಾರ್

ಸಿನಿಮಾ ಪತ್ರಕರ್ತರ ಹೆಮ್ಮೆಯ 7ನೇ ವರ್ಷದ ಚಂದನವನ ಫಿಲ್ಮ ಕ್ರಿಟಿಕ್ಸ್ ಅಕಾಡೆಮಿಯ ಪ್ರಶಸ್ತಿ (Chandanavana Film Critics Award) ಪ್ರದಾನ ಸಮಾರಂಭ ಬೆಂಗಳೂರಿನ ಜ್ಞಾನ ಜ್ಯೋತಿ ಸಭಾಂಗಣದಲ್ಲಿ ಅದ್ಧೂರಿಯಾಗಿ ನಡೆಯಿತು. 2025ನೇ ಸಾಲಿನಲ್ಲಿ ಬಿಡುಗಡೆಯಾದ ಸಿನಿಮಾಗಳಲ್ಲಿ ಆಯ್ದ ಕಲಾವಿದರಿಗೆ ಮತ್ತು ತಂತ್ರಜ್ಞರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಒಟ್ಟು 26 ವಿಭಾಗಗಳಲ್ಲಿ ಪ್ರಶಸ್ತಿ ವಿತರಿಸಲಾಯಿತು.

Film Critics Awards 2026

ಅತ್ಯುತ್ತಮ ನಟ ಪ್ರಶಸ್ತಿಯು ಕಾಂತಾರ ಚಾಪ್ಟರ್-1 ಸಿನಿಮಾದ ನಟನೆಗಾಗಿ ರಿಷಬ್ ಶೆಟ್ಟಿ (Rishab Shetty) ಪಾಲಾದರೆ, ಅತ್ಯುತ್ತಮ ನಟಿ ಪ್ರಶಸ್ತಿಯು ಗತ ವೈಭವ ಚಿತ್ರದ ನಟನೆಗಾಗಿ ಆಶಿಕಾ ರಂಗನಾಥ್ (Ashika Ranganath) ಪಡೆದರು. 2025ನೇ ಸಾಲಿನ ಅತ್ಯುತ್ತಮ ಸಿನಿಮಾ ಪ್ರಶಸ್ತಿ ಕಾಂತಾರ ಅಧ್ಯಾಯ-1‌ ರ ಪಾಲಾಯಿತು. ಕಾಂತಾರ ಸಿನಿಮಾ ಒಟ್ಟು 9 ವಿಭಾಗದಲ್ಲಿ ಪ್ರಶಸ್ತಿ ಪಡೆಯಿತು. 3 ಟ್ರೋಫಿಗಳಿಗೆ ಡಿವೈನ್ ಸ್ಟಾರ್ ರಿಷಬ್ ಮುತ್ತಿಟ್ಟಿದ್ದು ವಿಶೇಷವಾಗಿತ್ತು. ಇದನ್ನೂ ಓದಿ: ಸೆಟ್ಟೇರುತ್ತಿದೆ ʻಆಪರೇಷನ್‌ ಸಿಂಧೂರʼ ಸಿನಿಮಾ – ಭೂಷಣ್ ಕುಮಾರ್, ವಿವೇಕ್ ಅಗ್ನಿಹೋತ್ರಿ ಅಧಿಕೃತ ಘೋಷಣೆ

Film Critics Awards 2026 2

ಜೊತೆಗೆ ಕನ್ನಡದ ಟಾಕಿ ಚಿತ್ರಗಳ ಪ್ರಥಮ ನಾಯಕ ಸುಬ್ಬಯ್ಯ ನಾಯ್ಡು ಅವರ ಮರಿಮೊಮ್ಮಗ ಸುಕ್ರತ್ ಸೃಜನ್ ಲೋಕೇಶ್ ಅವರಿಗೆ ವಿಶೇಷ ಗೌರವ ಪ್ರಶಸ್ತಿ ಪ್ರದಾನ ಮಾಡಲಾಯಿತು. ಜೀವಮಾನ ಸಾಧನೆಯ ಗೌರವವನ್ನು ಹಿರಿಯ ನಿರ್ದೇಶಕ ರಾಜೇಂದ್ರ್ ಸಿಂಗ್ ಬಾಬು ಅವರಿಗೆ ನೀಡಲಾಯಿತು. ಇದನ್ನೂ ಓದಿ:  ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌

Film Critics Awards 2026 3

ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿಯ ಈ ಅದ್ಧೂರಿ ಹಾಗೂ ವರ್ಣರಂಜಿತ ಸಮಾರಂಭವನ್ನ ಜ್ಯೋತಿ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಮುಖ್ಯ ಅತಿಥಿಗಳಾಗಿ ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಗಿರೀಶ್ ಕಾಸರವಳ್ಳಿ, ರಾಷ್ಟ್ರ ಪ್ರಶಸ್ತಿ ವಿಜೇತ ನಟಿ ತಾರಾ ಅನುರಾಧ, ಹೆಸರಾಂತ ನಿರ್ಮಾಪಕ ರಾಕ್‌ಲೈನ್‌ ವೆಂಕಟೇಶ್, ಖ್ಯಾತ ನಿರ್ದೇಶಕ ಬಿ.ಸುರೇಶ್, ಹಿರಿಯ ನಟಿ ಗಿರಿಜಾ ಲೋಕೇಶ್, ಖ್ಯಾತ ನಟಿ ಪೂಜಾ ಗಾಂಧಿ, ನಟಿ ಹಾಗೂ ಕನ್ನಡ ಪರ ಹೋರಾಟಗಾರ್ತಿ ಅಶ್ವಿನಿ ಗೌಡ, ಖ್ಯಾತ ನಟ ಮಾಸ್ಟರ್ ಮಂಜುನಾಥ್ ಟೈಟಲ್ ಸ್ಪಾನ್ಸರ್ ಅಂಬರ್ಸ್ಟೋನ್ ಪ್ರಾಪರ್ಟೀಸ್ ಮ್ಯಾನೇಜಿಂಗ್ ಡೈರೆಕ್ಟರ್ ಯಶ್ವಂತ್ ಕುಮಾರ್, ಕಿರಣ್ ಕುಮಾರ್, ಕೀರ್ತಿ, ಅಶ್ವಸೂರ್ಯ ರಿಯಾಲಿಟಿಸ್ ಡೈರೆಕ್ಟರ್ ಎಸ್ ರಂಜಿತ್ ಕುಮಾರ್ ಅಲೈನ್ಸ್ ಯೂನಿವರ್ಸಿಟಿಯ ರೆಜಿಸ್ಟರ್ ಸುರೇಖಾ ಶೆಟ್ಟಿ ಸೇರಿದಂತೆ ಹಲವು ಗಣ್ಯರು ಆಗಮಿಸಿದ್ದರು. ಟೈಟಲ್ ಸ್ಪಾನ್ಸರ್ ಆಗಿ ಅಂಬರ್ಸ್ಟೋನ್ ಪ್ರಾಪರ್ಟೀಸ್ ಹಾಗೂ ಕೋ ಸ್ಪಾನ್ಸರ್ ಆಗಿ ಅಶ್ವಸೂರ್ಯ ರಿಯಾಲಿಟಿಸ್ ಪ್ರಶಸ್ತಿ ಸಮಾರಂಭಕ್ಕೆ ಜೊತೆಯಾಗಿತ್ತು.

Film Critics Awards 2026 4

ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ 2025ನೇ ಸಾಲಿನ ಪ್ರಶಸ್ತಿ ವಿಜೇತರು:

1. ಅತ್ಯುತ್ತಮ ಚೊಚ್ಚಲ ನಿರ್ಮಾಪಕ: ನಿವೇದಿತಾ ಶಿವರಾಜ್ ಕುಮಾರ್ (ಫೈರ್ ಪ್ಲೈ)
2. ಅತ್ಯುತ್ತಮ ಚೊಚ್ಚಲ ಬರಹಗಾರ: ಸುಮಂತ್ ಭಟ್ ( ಮಿಥ್ಯ)
3. ಅತ್ಯುತ್ತಮ ಚೊಚ್ಚಲ ಸಿನಿಮಾ ನಿರ್ದೇಶನ : ಭೀಮರಾವ್ ಪಿ (ಹೆಬ್ಬುಲಿ ಕಟ್)’
4. ಅತ್ಯುತ್ತಮ ಚೊಚ್ಚಲ ನಟಿ: ಪ್ರಿಯಾಂಕಾ ಆಚಾರ್ಯ ( ಏಳುಮಲೆ)
5. ಅತ್ಯುತ್ತಮ ಚೊಚ್ಚಲ ನಟ: ಕಿರಿಟಿ (ಜ್ಯೂನಿಯರ್) ಹಾಗೂ ದುಷ್ಯಂತ್ (ಗತ ವೈಭವ)
6. ಅತ್ಯುತ್ತಮ ಬಾಲ ನಟ: ಅತೀಶ್ ಶೆಟ್ಟಿ (ಮಿಥ್ಯ)
7. ಅತ್ಯುತ್ತಮ ವಿಎಫೆಕ್ಸ್: ಕೆ.ವಿ ಸಂಜಿತ್ (ಕಾಂತಾರ ಚಾಪ್ಟರ್ 1)
8. ಅತ್ಯುತ್ತಮ ಕಲಾ ನಿರ್ದೇಶನ: ಬೆಂಗಲನ್ ಮತ್ತು ಧರಣಿ ಗಂಗಾಪುತ್ರ (ಕಾಂತಾರ ಚಾಪ್ಟರ್ 1)9. ಅತ್ಯುತ್ತಮ ಸಾಹಸ ನಿರ್ದೇಶನ: ಅರ್ಜುನ್ ರಾಜ್ ( ಕಾಂತಾರ ಚಾಪ್ಟರ್ 1)
10. ಅತ್ಯುತ್ತಮ ಸಂಕಲನ: ಕೆ.ಎಂ ಪ್ರಕಾಶ್ (ಏಳುಮಲೆ)
11. ಅತ್ಯುತ್ತಮ ಸಂಭಾಷಣೆ: ಜೆ.ಪಿ ತುಮಿನಾಡು (ಸು ಫ್ರಂ ಸೋ)
12. ಅತ್ಯುತ್ತಮ ಸಿನಿಮಾಟೋಗ್ರಫಿ: ಅರವಿಂದ್ ಕಶ್ಯಪ್ (ಕಾಂತಾರ ಚಾಪ್ಟರ್ 1)
13. ಅತ್ಯುತ್ತಮ ನೃತ್ಯ ನಿರ್ದೇಶನ: ವಿನಾಯಕ ಆಚಾರ್ಯ ( ಸು ಫ್ರಂ ಸೋ)
14. ಅತ್ಯುತ್ತಮ ಗಾಯಕ: ಅಬ್ಬಿ ವಿ (ಕಾಂತಾರ ಚಾಪ್ಟರ್ 1)
15. ಅತ್ಯುತ್ತಮ ಗಾಯಕಿ: ಸಾನ್ವಿ ಸುದೀಪ್ (ಮಾರ್ಕ್)
16. ಅತ್ಯುತ್ತಮ ಚಿತ್ರ ಸಾಹಿತ್ಯ: ಸಿಂಪಲ್ ಸುನಿ (ಗತ ವೈಭವ)
17. ಅತ್ಯುತ್ತಮ ಹಿನ್ನೆಲೆ ಸಂಗೀತ: ಸಂದೀಪ್ ತುಳಸಿದಾಸ್ (ಸು ಫ್ರಂ ಸೋ)
18. ಅತ್ಯುತ್ತಮ ಸಂಗೀತ: ಅಜನೀಶ್ ಲೋಕನಾಥ್ (ಕಾಂತಾರ ಚಾಪ್ಟರ್ 1)
19. ಅತ್ಯುತ್ತಮ ಚಿತ್ರಕಥೆ: ಪುನೀತ್ ರಂಗಸ್ವಾಮಿ ( ಏಳು ಮಲೆ)
20. ಅತ್ಯುತ್ತಮ ಸಹ ನಟಿ: ಸಂಧ್ಯಾ ಅರಕೆರೆ ( ಸು ಫ್ರಂ ಸೋ)
21. ಅತ್ಯುತ್ತಮ ಸಹ ನಟ: ಮಹಾಂತೇಶ್ ಹಿರೇಮಠ (ಹೆಬ್ಬುಲಿ ಕಟ್)
22. ಅತ್ಯುತ್ತಮ ನಿರ್ದೇಶಕ: ರಿಷಬ್ ಶೆಟ್ಟಿ (ಕಾಂತಾರ ಚಾಪ್ಟರ್ 1)
23. ಅತ್ಯುತ್ತಮ ನಟಿ: ಆಶಿಕಾ ರಂಗನಾಥ್ ( ಗತ ವೈಭವ)
24. ಅತ್ಯುತ್ತಮ ನಟ: ರಿಷಬ್ ಶೆಟ್ಟಿ (ಕಾಂತಾರ ಚಾಪ್ಟರ್
25. ಅತ್ಯುತ್ತಮ ಚಿತ್ರ: ಕಾಂತಾರ ಚಾಪ್ಟರ್ 1
26. ಜೀವಮಾನ ಸಾಧನೆ ಪ್ರಶಸ್ತಿ: ಎಸ್.ವಿ.ರಾಜೇಂದ್ರ ಸಿಂಗ್ ಬಾಬು

[ad_2]

Source link publictv.in

Leave a Reply

Your email address will not be published. Required fields are marked *