[ad_1]
ಮಡಿಕೇರಿ: ಮಡಿಕೇರಿಯಿಂದ ಸುಳ್ಯ ಕಡೆಗೆ ತೆರಳಲು ಸಿದ್ಧವಾಗಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಸೋಮವಾರ (ಮಾ. 30) ಸಂಜೆ ತಾಂತ್ರಿಕ ದೋಷ ಉಂಟಾಗಿ ಆತಂಕಕಾರಿ ಘಟನೆ ಸಂಭವಿಸಿದೆ.
ಮಡಿಕೇರಿ ಬಸ್ ನಿಲ್ದಾಣದಲ್ಲೇ ಬಸ್‌ನ ಬ್ರೇಕ್ ವೈಫಲ್ಯಗೊಂಡ ಪರಿಣಾಮ, ನಿಯಂತ್ರಣ ತಪ್ಪಿದ ಬಸ್ ನಿಲ್ದಾಣದ ಕಂಬಕ್ಕೆ ಡಿಕ್ಕಿ ಹೊಡೆದು ನಿಂತಿತು. ಅದೃಷ್ಟವಶಾತ್, ಈ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಘಟನೆ ನಡೆದ ಸಮಯದಲ್ಲಿ ಬಸ್ ನಿಲ್ದಾಣದಲ್ಲಿ ಸಾಕಷ್ಟು ಪ್ರಯಾಣಿಕರು ಕುಳಿತಿದ್ದರು. ಬಸ್ ಕಂಬಕ್ಕೆ ಡಿಕ್ಕಿಯಾಗದೆ ಮುಂದೆ ಸಾಗಿದ್ದರೆ, ಅಲ್ಲಿದ್ದ ಜನರ ಜೀವಕ್ಕೆ ಗಂಭೀರ ಅಪಾಯ ಉಂಟಾಗುವ ಸಾಧ್ಯತೆ ಇತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಇನ್ನೂ, ಇದೇ ಬಸ್ ಘಾಟಿ ಪ್ರದೇಶದಲ್ಲಿ ಸಂಚರಿಸುತ್ತಿದ್ದಾಗ ಬ್ರೇಕ್ ವೈಫಲ್ಯಗೊಂಡಿದ್ದರೆ ಭೀಕರ ಅಪಘಾತ ಸಂಭವಿಸಬಹುದಿತ್ತು ಎಂಬ ಆತಂಕ ವ್ಯಕ್ತವಾಗಿದೆ.
ಘಟನೆಯ ನಂತರ ಬಸ್ ಅನ್ನು ತಕ್ಷಣವೇ ನಿಲುಗಡೆಗೊಳಿಸಲಾಗಿದ್ದು, ತಾಂತ್ರಿಕ ಪರಿಶೀಲನೆ ನಡೆಸಲಾಗುತ್ತಿದೆ. ಸಂಬಂಧಿಸಿದ ಅಧಿಕಾರಿಗಳು ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಸಂಗ್ರಹಿಸುತ್ತಿದ್ದಾರೆ ಎಂದು ವರದಿಯಾಗಿದೆ.
The post ಮಡಿಕೇರಿ: ಬಸ್ ನಿಲ್ದಾಣದಲ್ಲಿ ಬ್ರೇಕ್ ವೈಫಲ್ಯ: ಕಂಬಕ್ಕೆ ಡಿಕ್ಕಿಯಾದ ಕೆಎಸ್‌ಆರ್‌ಟಿಸಿ ಬಸ್: appeared first on Hosakananda.
[ad_2]
Source link

















Leave a Reply