Advertisement

ನಾಳೆಯಿಂದ ನೀರು, ವಿದ್ಯುತ್, ಟೋಲ್ ದರ ಏರಿಕೆ!!

[ad_1]

Price Hike : ಏಪ್ರಿಲ್ 1ರಿಂದ ಹೊಸ ಆರ್ಥಿಕ ವರ್ಷ ಆರಂಭವಾಗಲಿದ್ದು, ಹೊಸ ಆರ್ಥಿಕ ವರ್ಷದ ಮೊದಲ ದಿನದಿಂದಲೇ ವಿದ್ಯುತ್, ಟೋಲ್ ಹಾಗೂ ಬೆಂಗಳೂರು ನಗರದಲ್ಲಿ ನೀರಿನ ದರ ಏರಿಕೆಯಾಗಲಿದೆ. ಈ ಮೂಲಕ ಗ್ರಾಹಕರಿಗೆ ದರ ಏರಿಕೆಯ ನೇರ ಪರಿಣಾಮ ಬೀರಲಿದೆ.

ನೀರಿನ ದರ ಏರಿಕೆ:

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಏ.1ರಿಂದ ಅನ್ವಯವಾಗುವಂತೆ ನೀರಿನ ದರವನ್ನು ಶೇ.3ರಷ್ಟು ಹೆಚ್ಚಳ ಮಾಡಲಿದ್ದು, ಇದರಿಂದ ಬೆಂಗಳೂರಿಗರಿಗೆ ಮತ್ತೊಂದು ಹೊರೆ ಬೀಳಲಿದೆ.

ಟೋಲ್ ದರ ಏರಿಕೆ:

banner

ರಾಜ್ಯದ ಟೋಲ್ ಪ್ಲಾಜಾಗಳಲ್ಲಿ ಶೇ.3 ರಿಂದ 5ರಷ್ಟು ಟೋಲ್ ದರ ಏರಿಕೆಯಾಗಲಿದೆ. ಕಾರುಗಳಿಗೆ 5ರಿಂದ 10 ರೂ. ಟೋಲ್ (Toll) ಹೆಚ್ಚಳವಾಗಲಿದೆ. ವಾಣಿಜ್ಯ ಬಳಕೆಯ ವಾಹನಗಳಿಗೆ 15ರಿಂದ 40 ರೂ. ಅಧಿಕ ಪಾವತಿಸಬೇಕಾಗುತ್ತದೆ. ಇದರ ಜೊತೆ ಎನ್‌ಹೆಚ್‌ಎಐ ತನ್ನ ವಾರ್ಷಿಕ ಪಾಸ್ ದರವನ್ನು 2026-27ನೇ ಸಾಲಿಗೆ 75 ರೂ. ಹೆಚ್ಚಳ ಮಾಡಿ ಅಧಿಸೂಚನೆ ಹೊರಡಿಸಿದೆ. ಇದು ಕೂಡ ಏಪ್ರಿಲ್ 1ರಿಂದ ಜಾರಿಗೆ ಬರಲಿದೆ. ವಾರ್ಷಿಕ ಪಾಸ್ ದರವು 3,000 ರೂ. ಇದ್ದುದು 3,075 ರೂ.ಗೆ ಏರಿಕೆಯಾಗಲಿದೆ.

ವಿದ್ಯುತ್ ದರ ಏರಿಕೆ:

ಇನ್ನು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು (ಕೆಇಆರ್‌ಸಿ) ಸಾಕಷ್ಟು ಅಳೆದು ತೂಗಿ ಕೊನೆಗೂ ವಿದ್ಯುತ್ ದರವನ್ನು ಪರಿಷ್ಕರಿಸಿದ್ದು, ಮುಂಬರುವ ಹಣಕಾಸು ವರ್ಷದಲ್ಲಿ ಕೈಗಾರಿಕೆಗಳು ಮತ್ತು ವಾಣಿಜ್ಯ ಗ್ರಾಹಕರಿಗೆ ವಿದ್ಯುತ್ ದರ ಏರಿಕೆಯ ಬಿಸಿ ತಟ್ಟಲಿದೆ



[ad_2]

Source link

Leave a Reply

Your email address will not be published. Required fields are marked *