Advertisement

ಚಲಿಸುತ್ತಿದ್ದ ಬಸ್ ಡೋರ್ ಓಪನ್ ಆಗಿ ರಸ್ತೆಗೆ ಬಿದ್ದ ಸಹೋದರಿಯರು !!

[ad_1]

Belthangady : ಚಲಿಸುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಬಾಗಿಲು ಓಪನ್ ಆಗಿ ಬಾಗಿಲ ಬಳಿ ನಿಂತಿದ್ದ ವಿದ್ಯಾರ್ಥಿನಿಯರಿಬ್ಬರು ರಸ್ತೆಗೆ ಬಿದ್ದ ಆಘಾತಕಾರಿ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆ ಸಮೀಪದ ರೇಷ್ಮೆ ರೋಡ್‌ನಲ್ಲಿ ಚಲಿಸುತ್ತಿದ್ದ ಸರ್ಕಾರಿ ಬಸ್ಸೊಂದರ ಬಾಗಿಲು ಏಕಾಏಕಿ ತೆರೆದು ಸಹೋದರಿಯರಿಬ್ಬರು ರಸ್ತೆಗೆ ಬಿದ್ದು ಗಾಯಗೊಂಡ‌ ಘಟನೆ ಮಂಗಳವಾರ (ಮಾ.31) ನಡೆದಿದೆ. 

ಒಂದೇ ಮನೆಯ ಇಬ್ಬರು ವಿದ್ಯಾರ್ಥಿನಿಯರು ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರಲ್ಲಿ ಒಬ್ಬಾಕೆ ಬೆಳ್ತಂಗಡಿಯ ಖಾಸಗಿ ಕಾಲೇಜಿನ ಪಿಯುಸಿ ವಿದ್ಯಾರ್ಥಿನಿಯಾಗಿದ್ದರೆ, ಮತ್ತೋರ್ವಳು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ. ಇಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲು ಬಸ್ಸಿನಲ್ಲಿ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ. 

ಬಸ್ ಚಲಿಸುತ್ತಿದ್ದಾಗಲೇ ಬಾಗಿಲು ದಿಢೀರನೆ ತೆರೆದುಕೊಂಡಿದ್ದರಿಂದ ವಿದ್ಯಾರ್ಥಿನಿಯರು ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟಿದ್ದಾರೆ. ತಕ್ಷಣವೇ ಗಾಯಾಳುಗಳನ್ನು ಬೆಳ್ತಂಗಡಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

banner

ವಿಡಿಯೋ 👇

https://x.com/i/status/2038941076741083611



[ad_2]

Source link

Leave a Reply

Your email address will not be published. Required fields are marked *