Advertisement

Vijayapura: ಲವ್ ಬ್ರೇಕಪ್ ಎಂದು ಬಸ್ ಗೆ ಡಿಕ್ಕಿ ಹೊಡೆದು ಯುವಕ ಆತ್ಮಹತ್ಯೆ

[ad_1]

Vijayapura : ಲವ್ ಬ್ರೇಕ್ ಅಪ್ ಆಯ್ತು ಎಂದು  ಜೀವನದಲ್ಲಿ ಜಿಗುಪ್ಸೆ ಹೊಂದಿದ್ದ ಯುಕನೊಬ್ಬ ವೇಗವಾಗಿ ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ (KSRTC Bus) ತನ್ನ ಬೈಕ್‌ನೊಂದಿಗೆ ನೇರವಾಗಿ ಡಿಕ್ಕಿ ಹೊಡೆದಿದ್ದಾನೆ. ಇದರ ಪರಿಣಾಮ ಸವಾರಿ ಸ್ಥಳದಲ್ಲಿ ಸಾವನಪ್ಪಿದ್ದಲ್ಲದೆ, ಕೆ ಎಸ್ ಆರ್ ಟಿ ಸಿ ಬಸ್ಸಿಗೂ ಕೂಡ ಬೆಂಕಿ ಹತ್ತಿಕೊಂಡಿದೆ.

 ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದ ಅಲ್ಲಾಪುರ ಲೇಔಟ್‌ನ ಯವಕ ಅಭಿಷೇಕ ಸೈಬಗೌಡ ನಾಗರಳ್ಳಿ (19) ಮೃತ ದುರ್ದೈವಿ. ಕನ್ನೊಳ್ಳಿ ಕ್ರಾಸ್ ಬಳಿ ಹೋಗುತ್ತಿದ್ದ ಸರ್ಕಾರಿ ಬಸ್‌ಗೆ ಮೃತ ಅಭಿಷೇಕ ತನ್ನ ರಾಯಲ್ ಎನ್‌ಫೀಲ್ಡ್ ಬೈಕ್‌ನಲ್ಲಿ ಬಂದು ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿಯಾದ ರಭಸಕ್ಕೆ ಬೈಕ್‌ಗೆ ಬೆಂಕಿ ಹತ್ತಿದೆ. ಬಳಿಕ ಬಸ್ಸಿಗೂ ಬೆಂಕಿ ಆವರಿಸಿಕೊಂಡಿದ್ದು, ಭಾಗಶಃ ಸುಟ್ಟು ಕರಕಲಾಗಿದೆ. 

ಅದೃಷ್ಟವಶಾತ್ ಬಸ್ಸಿನಲ್ಲಿದ್ದ ಪ್ರಯಾಣಿಕರು ಸಮಯಪ್ರಜ್ಞೆಯಿಂದ ಕೆಳಗಿಳಿದ ಕಾರಣ ದೊಡ್ಡ ಮಟ್ಟದ ಪ್ರಾಣಾಪಾಯ ತಪ್ಪಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸುವ ಪ್ರಯತ್ನ ಮಾಡಿತು.ಈ ಭೀಕರ ಘಟನೆಯು ಕೇವಲ ಒಬ್ಬ ವ್ಯಕ್ತಿಯ ಪ್ರಾಣವನ್ನು ಬಲಿ ಪಡೆದಿಲ್ಲ, ಬದಲಿಗೆ ಸಾರ್ವಜನಿಕ ಆಸ್ತಿಗೆ ಅಪಾರ ಹಾನಿ ಉಂಟುಮಾಡಿದೆ.



[ad_2]

Source link

Leave a Reply

Your email address will not be published. Required fields are marked *