Advertisement

Belthangady : ಸಹೋದರಿಯರು ಬಸ್ ನಿಂದ ಬಿದ್ದ ಪ್ರಕರಣ

[ad_1]

Belthangady : ಚಲಿಸುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಬಾಗಿಲು ಓಪನ್ ಆಗಿ ಬಾಗಿಲ ಬಳಿ ನಿಂತಿದ್ದ ವಿದ್ಯಾರ್ಥಿನಿಯರಿಬ್ಬರು ರಸ್ತೆಗೆ ಬಿದ್ದ ಆಘಾತಕಾರಿ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ನಿನ್ನೆ ನಡೆದಿತ್ತು. ಈ ಘಟನೆಯ ಬಗ್ಗೆ ಬಸ್ಸಿನ ಚಾಲಕ ಹಾಗೂ ನಿರ್ವಾಹಕನ ವಿರುದ್ದ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಕಳಿಯದಿಂದ ಬೆಳ್ತಂಗಡಿ ಕಡೆಗೆ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ಸನ್ನು ಅದರ ಚಾಲಕ ದಯಾನಂದ ಅತ್ಯಂತ ಅಜಾಗರೂಕತೆಯಿಂದ ಚಲಾಯಿಸುತ್ತಾ ಬಂದಿದ್ದು ನಿರ್ವಾಹಕ ಕಾಶಿನಾಥ್ ಅವರು ಬಸ್ಸಿನ ಬಾಗಿಲು ಸರಿಯಾಗಿ ಹಾಕದೆ ಅಜಾಗರೂಕತೆಯಿಂದ ಇದ್ದ ಕಾರಣದಿಂದಾಗಿ ಚಲಿಸುತ್ತಿದ್ದ ಬಸ್ಸಿನ ಬಾಗಿಲು ತೆರದು ಇಬ್ಬರು ವಿದ್ಯಾರ್ಥಿನಿಯರಾದ ಒಂದೇ ಮನೆಯ ಸಹೋದರಿಯರು ಚರಿಷ್ಮಾ(17) ಮತ್ತು ಚಕಾ(15) ರಸ್ತೆಗೆ ಎಸೆಯಲ್ಪಟ್ಟು ಗಾಯಗೊಂಡಿದ್ದಾರೆ. ಅಪಘಾತಕ್ಕೆ ಕಾರಣರಾದ ಚಾಲಕ ಹಾಗೂ ನಿರ್ವಾಹಕನ ವಿರುದ್ದ ಗಾಯಗೊಂಡ ವಿದ್ಯಾರ್ಥಿನಿ ಚರಿಷ್ಮಾ(17) ನೀಡಿದ ದೂರಿನ ಮೇರೆಗೆ ಕಲಂ 281,125,125(a) ಬಿಎನ್ ಎಸ್ ಅಡಿಯಲ್ಲಿ ಮಾ.31 ರಂದು ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣದಾಖಲಿಸಲಾಗಿದೆ.

ಏನಿದು ಘಟನೆ?

ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆ ಸಮೀಪದ ರೇಷ್ಮೆ ರೋಡ್‌ನಲ್ಲಿ ಚಲಿಸುತ್ತಿದ್ದ ಸರ್ಕಾರಿ ಬಸ್ಸೊಂದರ ಬಾಗಿಲು ಏಕಾಏಕಿ ತೆರೆದು ಒಂದೇ ಮನೆಯ ಇಬ್ಬರು ವಿದ್ಯಾರ್ಥಿನಿಯರು ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಇವರಲ್ಲಿ ಒಬ್ಬಾಕೆ ಬೆಳ್ತಂಗಡಿಯ ಖಾಸಗಿ ಕಾಲೇಜಿನ ಪಿಯುಸಿ ವಿದ್ಯಾರ್ಥಿನಿಯಾಗಿದ್ದರೆ, ಮತ್ತೋರ್ವಳು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ. ನಿನ್ನೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲು ಬಸ್ಸಿನಲ್ಲಿ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ. 

banner

ಬಸ್ ಚಲಿಸುತ್ತಿದ್ದಾಗಲೇ ಬಾಗಿಲು ದಿಢೀರನೆ ತೆರೆದುಕೊಂಡಿದ್ದರಿಂದ ವಿದ್ಯಾರ್ಥಿನಿಯರು ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟಿದ್ದಾರೆ. ತಕ್ಷಣವೇ ಗಾಯಾಳುಗಳನ್ನು ಬೆಳ್ತಂಗಡಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.



[ad_2]

Source link

Leave a Reply

Your email address will not be published. Required fields are marked *