Advertisement

ಅನ್ಯಕೋಮಿನ ಅಪ್ರಾಪ್ತರಿಂದ ಹತ್ಯೆಯಾಗಿದ್ದ ಬಾಲಕನ ಸಮಾಧಿ ಒಡೆದ ಕಿಡಿಗೇಡಿಗಳು

[ad_1]

sanket s tomb

ಶಿವಮೊಗ್ಗ: ಗಲಾಟೆ ಬಿಡಿಸಲು ಹೋಗಿ ಅನ್ಯಕೋಮಿನ ಅಪ್ರಾಪ್ತರಿಂದ ಕೊಲೆಯಾಗಿದ್ದ ಶಿವಮೊಗ್ಗದ (Shivamogga) ಶಾಲಾ ಬಾಲಕ (Student) ಸಂಕೇತ್‌ ಸಮಾಧಿಗೆ ಹಾನಿ ಮಾಡಲಾಗಿದೆ.

ಫೆಬ್ರವರಿ 24ರಂದು ಊರಗಡೂರಿನ 10ನೇ ತರಗತಿ ವಿದ್ಯಾರ್ಥಿ ಸಂಕೇತ್‌ ಹತ್ಯೆಯಾಗಿತ್ತು. ಸಮೀಪದ ಗುಡ್ಡೆಮರಡಿಯ ಹಿಂದೂ ರುದ್ರಭೂಮಿಯಲ್ಲಿ ಸಂಕೇತ್‌ನ ಅಂತ್ಯೆಕ್ರಿಯೆ ನೆರವೇರಿಸಲಾಗಿತ್ತು. ಸಂಕೇತ್‌ ಸಮಾಧಿಗೆ ಕಟ್ಟೆ ನಿರ್ಮಿಸಿ ಫೋಟೋ ಅಳವಡಿಸಲಾಗಿತ್ತು. ಈಗ ಸಮಾಧಿಯ ಒಂದು ಭಾಗ ಒಡೆದಿರುವುದು ಗೊತ್ತಾಗಿದೆ. ಇದನ್ನೂ ಓದಿ: ಶಿವಮೊಗ್ಗದಲ್ಲಿ ಅನ್ಯಕೋಮಿನ ಅಪ್ರಾಪ್ತರಿಂದ SSLC ವಿದ್ಯಾರ್ಥಿ ಹತ್ಯೆ – ಇಬ್ಬರು ಅಪ್ರಾಪ್ತರ ಬಂಧನ

ಇದರಿಂದ ಬೇಸರ ಮತ್ತು ಆಕ್ರೋಶಗೊಂಡ ಸಂಕೇತ್‌ನ ಪೋಷಕರು ತುಂಗಾ ನಗರ ಠಾಣೆಗೆ ದೂರು ನೀಡಿದ್ದಾರೆ. ಈ ಸಂಬಂಧ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸಂಕೇತ್‌ನ ತಂದೆ ಶಿವಕುಮಾರ್‌ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ಸಮಾಧಿಗೆ ಸಂಕೇತ್‌ನ ಫೋಟೊ ಅಳವಡಿಸಲಾಗಿತ್ತು. ಅದನ್ನು ಕಲ್ಲಿನಿಂದ ಜಜ್ಜಿದ್ದಾರೆ. ಹಿಂದೆ ಹಾಕಿದ್ದ ಗ್ರಾನೈಟ್ ಒಡೆದು ಹಾಕಿದ್ದಾರೆ. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ಸಂಕೇತ್‌ನ ಸಾವಿನ ಬಳಿಕ ಮನೆಯಲ್ಲಿ ನೆಮ್ಮದಿ ಇಲ್ಲವಾಗಿದೆ. ಈಗ ಇಂತಹ ಘಟನೆ ನಡೆದಿರುವುದು ಮತ್ತಷ್ಟು ಆಘಾತ ತಂದಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಶಿವಮೊಗ್ಗದಲ್ಲಿ ಸಂಕೇತ್‌ ಹತ್ಯೆ| ಕೋಮು ಗಲಭೆ ಹುಟ್ಟು ಹಾಕಲು ಕೃತ್ಯ ಎಸಗಿದಂತಿದೆ – ಸಿಟಿ ರವಿ

[ad_2]

Source link publictv.in

Leave a Reply

Your email address will not be published. Required fields are marked *