Advertisement

Chitradurga : ಪ್ರಾಧ್ಯಾಪಕನ ಜೊತೆ ಸಂಬಂಧವಿದೆ ಎಂದು ಪಪ್ರಚಾರ

[ad_1]

Chitradurga : ಪ್ರಾಧ್ಯಾಪಕರೊಬ್ಬರ ಜೊತೆ ಅಕ್ರಮ ಸಂಬಂಧವಿದೆ ಸುಳ್ಳು ಸುದ್ದಿ ಹಬ್ಬಿಸಿ ಅಪಪ್ರಚಾರ ಮಾಡಿದ ಹಿನ್ನೆಲೆಯಲ್ಲಿ ಬಿಎಎಂಎಸ್ ವಿದ್ಯಾರ್ಥಿನಿಯೊಬ್ಬಳು ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ

ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆಯಲ್ಲಿ ಈ ಘಟನೆ ನಡೆದಿದ್ದು ಮೃತ ವಿದ್ಯಾರ್ಥಿನಿಯನ್ನು 23 ವರ್ಷದ ನಿಖಿತಾ ಎಂದು ಗುರುತಿಸಲಾಗಿದೆ. ವಿದ್ಯಾರ್ಥಿನಿ ಹೊಳಲ್ಕೆರೆಯ ಬಸವ ಲೇಔಟ್‌ನ ನಿವಾಸಿಯಾಗಿದ್ದು, ಕಳೆದ ಕೆಲವು ದಿನಗಳಿಂದ ಈಕೆಯ ಹೆಸರನ್ನು ಪ್ರಾಧ್ಯಾಪಕರೊಬ್ಬರ ಜೊತೆ ತಳುಕು ಹಾಕಿ ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಸಾರ್ವಜನಿಕವಾಗಿ ಅಪಪ್ರಚಾರ ಮಾಡಲಾಗಿತ್ತು. 

ಡೆತ್‌ ನೋಟ್‌ ಪತ್ತೆ :

ಆತ್ಮಹತ್ಯೆಗೂ ಮುನ್ನ ನಿಖಿತಾ ಸುದೀರ್ಘ ಡೆತ್‌ನೋಟ್ ಬರೆದಿಟ್ಟಿದ್ದು, ಅದರಲ್ಲಿ ತನ್ನ ಸಾವಿಗೆ ಪ್ರಾಧ್ಯಾಪಕ ರಾಜು, ಅವರ ಪತ್ನಿ ಹಾಗೂ ಕೆಲವು ಸಹಪಾಠಿ ವಿದ್ಯಾರ್ಥಿನಿಯರು ತನ್ನ ಮಾನಸಿಕ ಕಿರುಕುಳಕ್ಕೆ ಕಾರಣ ಎಂದು ಪತ್ರದಲ್ಲಿ ತಿಳಿಸಿದ್ದಾರೆ. ತನ್ನ ಚಾರಿತ್ರ್ಯಕ್ಕೆ ಧಕ್ಕೆ ತರುವ ರೀತಿಯಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ್ದು ಮತ್ತು ಮಾನಸಿಕವಾಗಿ ಹಿಂಸೆ ನೀಡಿದ್ದೇ ಈ ನಿರ್ಧಾರಕ್ಕೆ ಪ್ರೇರಣೆ ಎಂದು ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ.

banner

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ವಿದ್ಯಾರ್ಥಿನಿಯರ ಪೋಷಕರು ದೂರಿನ ಮೇರೆಗೆ ಪ್ರಕರಣದ ಕಲಿಸಿಕೊಂಡು ತನಿಖೆಯನ್ನು ಶುರು ಮಾಡಿದ್ದಾರೆ.



[ad_2]

Source link

Leave a Reply

Your email address will not be published. Required fields are marked *