Advertisement

Kadaba: ಕಂಟೈನರ್ ನಲ್ಲಿ ಕೇರಳಕ್ಕೆ ಅಕ್ರಮವಾಗಿ ದನ ಸಾಗಾಟ

[ad_1]

Kadaba: ಕಂಟೈನರ್ ಲಾರಿಯಲ್ಲಿ ಕೇರಳಕ್ಕೆ ಅಕ್ರಮ ಜಾನುವಾರು ಸಾಗಾಟ ಮಾಡುತ್ತಿದ್ದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬಾದಲ್ಲಿ ನಡೆದಿದೆ. ಇದೀಗ ಇದನ್ನು ಪತ್ತೆ ಹಚ್ಚಿರುವ ಕಡಬ ಠಾಣಾ ಪೊಲೀಸರು, ಓರ್ವನನ್ನು ಬಂಧಿಸಿ, 18 ಜಾನುವಾರುಗಳನ್ನು ವಶಕ್ಕೆ ಪಡೆದಿದ್ದಾರೆ. 

ಹಾಸನದಿಂದ ಕೇರಳ ಕಡೆಗೆ ಕಂಟೇನರ್ ವಾಹನದಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿರುವ ಬಗ್ಗೆ ಲಭಿಸಿದ ಖಚಿತ ಮಾಹಿತಿಯನ್ವಯ ಕಡಬ ಠಾಣಾ ಪೊಲೀಸರು ಶುಕ್ರವಾರ ಬೆಳಗಿನ ಜಾವ ಕಡಬದ ಕನ್ವರೆ ಎಂಬಲ್ಲಿ ವಾಹನವನ್ನು ತಡೆದು ನಿಲ್ಲಿಸಿ ಪರಿಶೀಲಿಸಿದ್ದಾರೆ. ಈ ವೇಳೆ ಕಂಟೇನರ್ ನಲ್ಲಿ ಸುಮಾರು 18 ಜಾನುವಾರುಗಳನ್ನು ಅಕ್ರಮವಾಗಿ ಸಾಗಿಸುತ್ತಿರುವುದು ಕಂಡುಬಂದಿದೆ. 

ಕಡಬ ಠಾಣಾ ಸಬ್ ಇನ್ ಸ್ಪೆಕ್ಟರ್ ಜಂಬೂರಾಜ್ ಮಹಾಜನ್ ನೇತೃತ್ವದ ಪೊಲೀಸರ ತಂಡ ಓರ್ವನನ್ನು ಬಂಧಿಸಿದ್ದು, ಇನ್ನೋರ್ವ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.



[ad_2]

Source link

Leave a Reply

Your email address will not be published. Required fields are marked *