[ad_1]
ಮಂಗಳೂರು : ಕರಾವಳಿ ಜಿಲ್ಲೆಯಾದ್ಯಂತ ರಣ ಬಿಸಿಲಿನಿಂದಾಗಿ ದಿನದಿಂದ ದಿನಕ್ಕೆ ತಾಪಮಾನ ದಾಖಲೆ ಮಟ್ಟದಲ್ಲಿ ಏರಿಕೆಯಾಗುತ್ತಿದ್ದು, ಸಾರ್ವಜನಿಕರು ಉರಿ ಸೆಕೆಗೆ ಬೆವೆತು ಹೋಗಿದ್ದಾರೆ. ಈ ನಡುವೆ ಉಷ್ಣಾಂಶ ಹೆಚ್ಚಳದಿಂದಾಗಿ ‘ಶಾಖಾಘಾತ’ ಸಂಭವಿಸುವ ಸಾಧ್ಯತೆ ಇರುವ ಬಗ್ಗೆ ಆರೋಗ್ಯ ಇಲಾಖೆ ತೀವ್ರ ಮುನ್ನೆಚ್ಚರಿಕೆ ನೀಡಿದೆ.
ಒಂದು ಪ್ರದೇಶದ ಸಾಮಾನ್ಯ ಉಷ್ಣತೆಗಿಂತ 4.5 ಡಿಗ್ರಿ ಸೆಲ್ಸಿಯಸ್‌ನಿಂದ 6.4 ಡಿಗ್ರಿ ಸೆಲ್ಸಿಯಸ್‌ನಷ್ಟು ತಾಪಮಾನ ಹೆಚ್ಚಾದಲ್ಲಿ ಶಾಖಾಘಾತ ಸಂಭವಿಸುತ್ತದೆ.
ದಕ್ಷಿಣ ಕನ್ನಡದಲ್ಲಿ ಈಗಾಗಲೇ ಉಷ್ಣಾಂಶವು 40 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿದೆ. ಇದರ ಪರಿಣಾಮವಾಗಿ ಮೈಮೇಲೆ ಬೆವರುಸಾಲೆ, ಮಾಂಸಖಂಡಗಳ ಸೆಳೆತ, ತಲೆಸುತ್ತುವಿಕೆ ಉಂಟಾಗಬಹುದು. ತೀವ್ರತರದ ಹಂತದಲ್ಲಿ ಇದು ಎದೆಯ ಸೆಳೆತ ಹಾಗೂ ಹೃದಯಾಘಾತಕ್ಕೂ ಕಾರಣವಾಗಬಹುದು ಎಂದು ವೈದ್ಯರು ಎಚ್ಚರಿಕೆ ನೀಡಿದ್ದಾರೆ.
ಮಧ್ಯಾಹ್ನ 12 ರಿಂದ 3 ಗಂಟೆಯವರೆಗೆ ಅನಗತ್ಯವಾಗಿ ಬಿಸಿಲಿಗೆ ಹೋಗುವುದನ್ನು ತಪ್ಪಿಸಿ, ಸಾಕಷ್ಟು ನೀರು ಕುಡಿಯಿರಿ, ದೇಹವನ್ನು ನಿರ್ಜಲೀಕರಣಗೊಳಿಸುವ ಆಲೋಹಾಲ್, ಚಹಾ, ಕಾಫಿ ಮತ್ತು ಕಾರ್ಬೋನೇಟೆಡ್ ಪಾನೀಯಗಳಿಂದ ದೂರವಿರಿ, ಹಗುರವಾದ, ತಿಳಿ ಬಣ್ಣದ ಹತ್ತಿ ಬಟ್ಟೆಗಳನ್ನು ಧರಿಸಿ, ಹೊರಗೆ ಹೋಗುವಾಗ ಛತ್ರಿ, ಟೋಪಿ ಮತ್ತು ಕನ್ನಡಕ ಬಳಸಿ, ಮಕ್ಕಳನ್ನು ಮಧ್ಯಾಹ್ನದ ಬಿಸಿಲಿನಲ್ಲಿ ಆಟವಾಡಲು ಬಿಡಬೇಡಿ ಎಂದು ಆರೋಗ್ಯ ಇಲಾಖೆ ಮಾರ್ಗಸೂಚಿ ನೀಡಿದೆ.
ಬಿಸಿಲಿನ ತಾಪ ಕೇವಲ ಮನುಷ್ಯರಿಗಷ್ಟೇ ಅಲ್ಲ, ಮೀನುಗಾರಿಕೆಗೂ ಹೊಡೆತ ನೀಡಿದೆ. ಸಮುದ್ರದ ಮೇಲ್ಮ ನೀರು ಬಿಸಿಯಾಗುತ್ತಿರುವುದರಿಂದ ಮೀನುಗಳು ಸಮುದ್ರದಾಳಕ್ಕೆ ಸೇರುತ್ತಿವೆ. ಇದರಿಂದಾಗಿ ಮೀನುಗಾರರ ಬಲೆಗೆ ಮೀನುಗಳು ಬೀಳುತ್ತಿಲ್ಲ, ಇದು ಮೀನುಗಾರರನ್ನು ಆತಂಕಕ್ಕೆ ತಳ್ಳಿದೆ.
ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ಶಾಖಾಘಾತಕ್ಕೆ ಒಳಗಾದವರಿಗೆ ಚಿಕಿತ್ಸೆ ನೀಡಲು ವಿಶೇಷ ವ್ಯವಸ್ಥೆ ಮಾಡಲಾಗಿದ್ದು, ಜನರು ಮುಂಜಾಗ್ರತೆ ವಹಿಸುವಂತೆ ಜಿಲ್ಲಾ ಆರೋಗ್ಯಾಧಿಕಾರಿಗಳು ಸೂಚಿಸಿದ್ದಾರೆ.
The post ಕರಾವಳಿಯಲ್ಲಿ ಹೆಚ್ಚಿದ ಉಷ್ಣಾಂಶ: ಶಾಖಾಘಾತದ ಎಚ್ಚರಿಕೆ appeared first on Hosakananda.
[ad_2]
Source link

















Leave a Reply