Advertisement

ರಸ್ತೆ ಪಕ್ಕದ ಬಾವಿಗೆ ಉರುಳಿದ ಕಾರು ; ಮಕ್ಕಳು ಸೇರಿ ಒಂದೇ ಕುಟುಂಬದ 9 ಮಂದಿ ಜಲಸಮಾಧಿ

[ad_1]

ಮುಂಬೈ : ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ದಿಂಡೋರಿ ತಾಲೂಕಿನಲ್ಲಿ ಭಿಕರ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಪಕ್ಕದ ಆಳವಾದ ಬಾವಿಗೆ ಉರುಳಿ ಬಿದ್ದ ಪರಿಣಾಮ, ಮಕ್ಕಳು ಸೇರಿದಂತೆ ಒಂದೇ ಕುಟುಂಬದ 9 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸಾವನಪ್ಪಿದ್ದವರು ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದು, ಖಾಸಗಿ ಶಾಲೆಯ ಸ್ನೇಹ ಸಮ್ಮೇಳನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಮುಗಿಸಿಕೊಂಡು ಮನೆಗೆ ಮರಳುತ್ತಿದ್ದರು. ಈ ವೇಳೆ ದಿಂಡೋರಿ ರಸ್ತೆಯಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ ನೇರವಾಗಿ ನೀರು ತುಂಬಿದ್ದ ಬಾವಿಗೆ ಬಿದ್ದಿದೆ.

ಮೃತಪಟ್ಟವರಲ್ಲಿ ಏಳು ಮಂದಿ ವಿದ್ಯಾರ್ಥಿಗಳು ಮತ್ತು ಇಬ್ಬರು ಪೋಷಕರು ಸೇರಿದ್ದಾರೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಮೃತರನ್ನು ಇಂದೋರೆ ಗ್ರಾಮದ ದರಗುಡೆ ಕುಟುಂಬದ ಸದಸ್ಯರೆಂದು ಗುರುತಿಸಲಾಗಿದೆ. ಘಟನೆ ನಡೆದ ತಕ್ಷಣ ಸ್ಥಳೀಯರು ಮತ್ತು ಪೊಲೀಸರು ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ಜೆಸಿಬಿ ಮತ್ತು ಕ್ರೇನ್ ಸಹಾಯದಿ೦ದ ಬಾವಿಯಿಂದ ಕಾರನ್ನು ಮೇಲೆತ್ತಲಾಯಿತು. ಅಷ್ಟರಲ್ಲಾಗಲೇ ಕಾರಿನಲ್ಲಿದ್ದವರೆಲ್ಲರೂ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ.



[ad_2]

Source link

Leave a Reply

Your email address will not be published. Required fields are marked *