Advertisement

Tamilunadu: ತಮಿಳುನಾಡಿನಲ್ಲಿ ಅಣ್ಣಾ ಮಲೈಗೆ ಇಲ್ಲ ಬಿಜೆಪಿ ಟಿಕೆಟ್

[ad_1]

Tamilunadu : ತಮಿಳುನಾಡು ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ಒಂದು ನಡೆದಿದ್ದು ವಿಧಾನಸಭಾ ಚುನಾವಣೆಯಲ್ಲಿ ಅಣ್ಣಾಮಲೈಗೆ ಬಿಜೆಪಿ ಟಿಕೆಟ್ ನಿರಾಕರಣೆ ಮಾಡಿದೆ. ಈ ವಿಚಾರ ರಾಜ್ಯಾದ್ಯಂತ ಭಾರಿ ಸಂಚಲನವನ್ನು ಸೃಷ್ಟಿಸಿದೆ. ಈ ಬೆನ್ನಲ್ಲೇ ಈ ವಿಚಾರವಾಗಿ ಇದೀಗ ಅಣ್ಣಮಲೈ ಅವರು ಕ್ಲಾರಿಟಿ ನೀಡಿದ್ದಾರೆ. 

ಹೌದು, ತಮಿಳುನಾಡಿನಲ್ಲಿ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದೆ. ಒಂದೊಂದೇ ಪಕ್ಷಗಳು ಟಿಕೆಟ್ ಘೋಷಣೆ ಮಾಡುತ್ತಿವೆ. ಆದರೆ ಇದೀಗ ತಮಿಳುನಾಡಿನ ಮಾಜಿ ಬಿಜೆಪಿ ಅಧ್ಯಕ್ಷ ಅಣ್ಣಾಮಲೈಗೆ ಟಿಕೆಟ್ ಘೋಷಣೆ ಮಾಡದಿರುವುದು ಚರ್ಚಿತ ವಿಷಯವಾಗಿದೆ. ಈ ಬಗ್ಗೆ ಅಣ್ಣಾಮಲೈ (Annamalai) ಕೊನೆಗೂ ಮೌನ ಮುರಿದಿದ್ದಾರೆ.

ಚೆನ್ನೈನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಾನು ನಿರ್ಧರಿಸಿದ್ದೇನೆ. ಪಕ್ಷದ ಕೋರ್ ಕಮಿಟಿಗೆ (BJP Core Committee) ಈ ನಿರ್ಧಾರವನ್ನ ಮುಂಚಿತವಾಗಿ ತಿಳಿಸಿದ್ದೇನೆ. ಯಾವುದೇ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ ಎಂದು ಲಿಖಿತವಾಗಿ ಕೊಟ್ಟಿದ್ದೇನೆ. ಇದಿಷ್ಟಕ್ಕೇ ನನಗೆ ಟಿಕೆಟ್‌ ನಿರಾಕರಿಸಲಾಗಿದೆ ಎಂದರ್ಥವಲ್ಲ, ಸ್ಪರ್ಧೆ ಮಾಡದೇ ಇರಲು ನಾನೇ ನಿರ್ಧಾರ ಮಾಡಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.



[ad_2]

Source link

Leave a Reply

Your email address will not be published. Required fields are marked *