Advertisement

HSRP ಅಳವಡಿಕೆ ಕಡ್ಡಾಯವಲ್ಲ ಎಂಬುದು ಸುಳ್ಳು ಸುದ್ದಿ

[ad_1]

HSRP: ರಾಜ್ಯ ಸರ್ಕಾರವು ವಾಹನ ಸವಾರರಿಗೆ ಶಾಕ್ ನೀಡಿದ್ದು ಇದುವರೆಗೂ ಕಡ್ಡಾಯ ಎಂದು ಹೇಳುತ್ತಿದ್ದ HSRP ನಂಬರ್ ಪ್ಲೇಟ್ ಅಳವಡಿಕೆ ಕಡ್ಡಾಯ ಆದೇಶವನ್ನು ವಾಪಸ್ ಪಡೆದುಕೊಂಡಿದೆ ಎಂಬ ವಿಚಾರ ಕೆಲವು ದಿನಗಳಿಂದ ರಾಜ್ಯಾದ್ಯಂತ ಸಾಕಷ್ಟು ಸುದ್ದಿ ಮಾಡುತ್ತಿದೆ. ಈ ಬೆನ್ನಲ್ಲೇ ಇದೀಗ ರಾಜ್ಯ ಸಾರಿಗೆ ಇಲಾಖೆಯು ಈ ಕುರಿತು ಮಹತ್ವದ ಅಪ್ಡೇಟ್ ಒಂದನ್ನು ನೀಡಿದೆ.

2019ರ ಏಪ್ರಿಲ್ 1ರ ಮೊದಲು ನೋಂದಾಯಿಸಲ್ಪಟ್ಟ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಅಳವಡಿಕೆ ಮಾಡುವುದನ್ನು ಸಾರಿಗೆ ಇಲಾಖೆ ಕಡ್ಡಾಯಗೊಳಿಸಿ 2023ರ ಆಗಸ್ಟ್‌ನಲ್ಲಿ ಅಧಿಸೂಚನೆ ಹೊರಡಿಸಿತ್ತು. ಬಳಿಕ ನಂಬರ್ ಪ್ಲೇಟ್ ಅಳವಡಿಕೆಗಾಗಿ ಸಮಯವನ್ನು ವಿಸ್ತರಿಸುತ್ತಾ ಬಂದಿತ್ತು. ಸಮಯ ಮೀರಿದ ಬಳಿಕ ಫೈಲ್ ಕೂಡ ಕಟ್ಟಿಸಿಕೊಂಡಿತ್ತು. ಆದರೆ ಇದೀಗ ಅಚ್ಚರಿ ಎಂಬಂತೆ ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆ ಕಡ್ಡಾಯ ಎಂಬ ಆದೇಶವನ್ನು ಸರ್ಕಾರ ಹಿಂಪಡೆದಿದೆ ಎಂದು ಹೇಳಲಾಗಿತ್ತು. ಆದರೆ ಇದೀಗ 2019ರ ಏಪ್ರಿಲ್ 1ಕ್ಕಿಂತ ಮೊದಲು ನೋಂದಣಿಯಾಗಿರುವ ಎಲ್ಲ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಕಡ್ಡಾಯವಾಗಿದ್ದು, ಈ ನಿಯಮದಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ಇಲಾಖೆ ಸ್ಪಷ್ಟಪಡಿಸಿದೆ.

ಇತ್ತೀಚೆಗೆ ಕೆಲವು ಮಾಧ್ಯಮಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ಎಚ್‌ಎಸ್‌ಆರ್‌ಪಿ ಅಳವಡಿಕೆ ಕಡ್ಡಾಯವಲ್ಲ ಅಥವಾ ನಿಯಮ ಸಡಿಲಿಕೆಯಾಗಿದೆ ಎಂಬ ಸುದ್ದಿಗಳು ಪ್ರಕಟವಾಗಿದ್ದವು. ಈ ವರದಿಗಳನ್ನು ಸಾರಿಗೆ ಇಲಾಖೆ ತಳ್ಳಿಹಾಕಿದ್ದು, ಇವು ಸತ್ಯಕ್ಕೆ ದೂರವಾದವು ಎಂದು ಹೇಳಿದೆ. ಕೇಂದ್ರ ಸರ್ಕಾರದ ಅಧಿಸೂಚನೆಯಂತೆ ಈ ನಿಯಮ ಜಾರಿಯಲ್ಲಿದ್ದು, ವಾಹನ ಸವಾರರು ಕಡ್ಡಾಯವಾಗಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳಬೇಕು ಎಂದು ಸೂಚಿಸಿದೆ.



[ad_2]

Source link

Leave a Reply

Your email address will not be published. Required fields are marked *