[ad_1]
ಮಂಗಳೂರು: 2020ರಲ್ಲಿ ಬಂಟ್ವಾಳ ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಾಂಜಾ ಮಾರಾಟ ಪ್ರಕರಣಕ್ಕೆ ಕುರಿತಂತೆ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆರೋಪಿ ಟಿ.ಪಿ. ಫಾರೂಕ್ (50) ಎಂಬಾತನಿಗೆ 7 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 70,000 ರೂಪಾಯಿ ದಂಡ ವಿಧಿಸಿ ನ್ಯಾಯಾಧೀಶರಾದ ಬಸವರಾಜ್ ಆದೇಶ ಹೊರಡಿಸಿರುವ ಕುರಿತು ವರದಿಯಾಗಿದೆ.
ನ. 10 2020 ರಂದು ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ ಮೇಲ್ಕಾರ್ ಬಸ್ ನಿಲ್ದಾಣದ ಬಳಿ ಕಾರಿನಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಆಗಿನ ಬಂಟ್ವಾಳ ನಗರ ಠಾಣಾ ಪೊಲೀಸ್ ನಿರೀಕ್ಷಕರಾದ ಚೆಲುವರಾಜ್ ರವರು ತಂಡದೊಂದಿಗೆ ದಾಳಿ ನಡೆಸಿದ್ದರು. ಈ ಕಾರ್ಯಾಚರಣೆಯಲ್ಲಿ 49,000/- ರೂ. ಮೌಲ್ಯದ. 1.480 ಕಿ.ಗ್ರಾಂ ಗಾಂಜಾ ಮತ್ತು ಇಬ್ಬರು ಆರೋಪಿಗಳನ್ನು ದಸ್ತಗಿರಿ ಮಾಡಲಾಗಿತ್ತು.
ಈ ಕುರಿತಾಗಿ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ಆಗಿನ ಬಂಟ್ವಾಳ ವೃತ್ತ ನಿರೀಕ್ಷಕರಾಗಿದ್ದ ಟಿ.ಡಿ. ನಾಗರಾಜ್ ರವರು ದಕ್ಷತೆಯಿಂದ ತನಿಖೆ ನಡೆಸಿ. ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ಸುದೀರ್ಘವಾಗಿ ನಡೆದು. ಸರಕಾರದ ಪರವಾಗಿ ಸರಕಾರಿ ಅಭಿಯೋಜಕರಾದ ಶ್ರೀಮತಿ ಜೂಡಿತಾ ಅವರು ಸಮರ್ಥವಾಗಿ ವಾದ ಮಂಡಿಸಿ, ಆರೋಪಿಯ ಅಪರಾಧವನ್ನು ಸಾಬೀತುಪಡಿಸುವಲ್ಲಿ ಯಶಸ್ವಿಯಾದರು.
The post ಬಂಟ್ವಾಳ : ಗಾಂಜಾ ಮಾರಾಟ, ವ್ಯಕ್ತಿಗೆ 7 ವರ್ಷ ಜೈಲು, 70 ಸಾವಿರ ದಂಡ! appeared first on Hosakananda.
[ad_2]
Source link

















Leave a Reply