Advertisement

ಟ್ರಂಪ್ ಒಪ್ಪಿಗೆ ಇಲ್ಲದೆ ಭಾರತ ತೈಲ ಖರೀದಿಸಲು ಸಾಧ್ಯವಿಲ್ಲ: ರಾಹುಲ್‌ ಗಾಂಧಿ ಲೇವಡಿ

[ad_1]

Rahul Gandhi

ದಿಸ್ಪುರ: ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ (Donald Trump) ಅನುಮತಿ ಇಲ್ಲದೆ ಭಾರತ ಯಾವುದೇ ದೇಶದಿಂದ ತೈಲ ಖರೀದಿಸಲು ಸಾಧ್ಯವಿಲ್ಲ ಎಂದು ರಾಹುಲ್ ಗಾಂಧಿ (Rahul Gandhi) ಹೇಳಿದ್ದಾರೆ.

ಅಸ್ಸಾಂನ (Assam) ಗೋಲಾಘಾಟ್‌ನಲ್ಲಿ ನಡೆದ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಟ್ರಂಪ್ ಬಹಿರಂಗವಾಗಿಯೇ ಹೇಳಿದ್ದಾರೆ. ನರೇಂದ್ರ ಮೋದಿ ನನ್ನನ್ನು ‘ಸರ್’ ಎಂದು ಕರೆಯುತ್ತಾರೆ. ನಾನು ಯಾವಾಗ ಬೇಕಾದರೂ ಅವರ ವೃತ್ತಿಜೀವನವನ್ನು ಕೊನೆಗೊಳಿಸಬಹುದು. ಅಮೆರಿಕದ ಅಧ್ಯಕ್ಷ ಟ್ರಂಪ್ ಅವರು ಮೋದಿ ಬಗ್ಗೆ ಸಂಪೂರ್ಣ ಸತ್ಯವನ್ನು ಒಳಗೊಂಡಿರುವ ಎಪ್ಸ್ಟೀನ್ ಫೈಲ್ ಅನ್ನು ಹೊಂದಿರುವುದರಿಂದ ಅವರು ಹೀಗೆ ಹೇಳುತ್ತಿದ್ದಾರೆ. ಟ್ರಂಪ್ ಅಮೆರಿಕದಲ್ಲಿ ಅದಾನಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಿದ್ದಾರೆ. ಏಕೆಂದರೆ ಇದು ಬಿಜೆಪಿಯ ಹಣಕಾಸು ವ್ಯವಸ್ಥೆ ಎಂದು ಅವರಿಗೆ ತಿಳಿದಿದೆ ಎಂದು ರಾಹುಲ್‌ ಗಾಂಧಿ ತಿಳಿಸಿದ್ದಾರೆ. ಇದನ್ನೂ ಓದಿ: Terminated – ಬೃಹತ್‌ ದಾಳಿಯಲ್ಲಿ ಇರಾನ್‌ ಮಿಲಿಟರಿ ಪಡೆಯ ಟಾಪ್‌ ಕಮಾಂಡರ್‌ಗಳ ಹತ್ಯೆ: ಟ್ರಂಪ್‌

ಈಗ ಪರಿಸ್ಥಿತಿ ಹೀಗಿದೆ. ಟ್ರಂಪ್ ಅನುಮತಿಯಿಲ್ಲದೇ ಭಾರತ ಯಾವುದೇ ದೇಶದಿಂದ ತೈಲವನ್ನು ಖರೀದಿಸಲು ಸಾಧ್ಯವಿಲ್ಲ. ನರೇಂದ್ರ ಮೋದಿ ಭಾರತದ ಇಂಧನ ಭದ್ರತೆ ಮತ್ತು ಡೇಟಾವನ್ನು ಅಮೆರಿಕದ ಕೈಗೆ ಹಸ್ತಾಂತರಿಸಿದ್ದಾರೆ. ಇದು ನರೇಂದ್ರ ಮೋದಿ ರಾಜಿ ಮಾಡಿಕೊಂಡ ಪರಿಣಾಮ ಎಂದು ವಾಗ್ದಾಳಿ ನಡೆಸಿದ್ದಾರೆ.

ಪಶ್ಚಿಮ ಬಂಗಾಳ, ತಮಿಳುನಾಡು, ಅಸ್ಸಾಂ, ಕೇರಳ ಮತ್ತು ಪುದುಚೇರಿ ಕೇಂದ್ರಾಡಳಿತ ಪ್ರದೇಶಗಳು ಮುಂಬರುವ ಚುನಾವಣೆಗಳಿಗೆ ಸಿದ್ಧತೆ ನಡೆಸುತ್ತಿದ್ದು, ಚುನಾವಣಾ ಆಯೋಗವು ಇತ್ತೀಚಿನ ವಾರಗಳಲ್ಲಿ ವೇಳಾಪಟ್ಟಿಯನ್ನು ಈಗಾಗಲೇ ಪ್ರಕಟಿಸಿದೆ. ಇದನ್ನೂ ಓದಿ: ಇರಾನ್‌ನಲ್ಲಿ ಕಾಣೆಯಾಗಿದ್ದ US ವಾಯುಪಡೆಯ ಮತ್ತೋರ್ವ ಪೈಲಟ್‌ ರಕ್ಷಣೆ – ಹೇಗಿತ್ತು ಥ್ರಿಲ್ಲಿಂಗ್‌ ಕಾರ್ಯಾಚರಣೆ?

ಪಶ್ಚಿಮ ಬಂಗಾಳದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ಪ್ರಚಾರ ತೀವ್ರಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಬಿಜೆಪಿಯ ಉನ್ನತ ನಾಯಕತ್ವವು ರಾಜ್ಯ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸುತ್ತಿದೆ.

[ad_2]

Source link publictv.in

Leave a Reply

Your email address will not be published. Required fields are marked *