Advertisement

ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ

[ad_1]

DARSHAN RENUKASWAMY

ರೇಣುಕಾಸ್ವಾಮಿ ಕೊಲೆ (Renukaswamy Case) ಪ್ರಕರಣ ಆಧರಿತ ಚಲನಚಿತ್ರ ‘ಬಾಸ್’ (Boss Movie) ಬಿಡುಗಡೆ ಮಾಡದಂತೆ ಕೋರ್ಟ್ ತಡೆಯಾಜ್ಞೆ ನೀಡಿದೆ.

ಬಾಸ್ ಎಂಬ ಚಿತ್ರ ನಿರ್ಮಾಣ ಮಾಡಿದ್ದು, ಈಗಾಗಲೇ ಸೋಷಿಯಲ್ ಮೀಡಿಯಾದಲ್ಲಿ ಟೀಸರ್ ಅನ್ನು ಚಲನಚಿತ್ರ ತಂಡ ಬಿಡುಗಡೆ ಮಾಡಿತ್ತು. ಬಿಡುಗಡೆ ಮಾಡಿದ್ದ ತುಣುಕಿನಲ್ಲಿ ರೇಣುಕಾಸ್ವಾಮಿ ಕೊಲೆಯನ್ನು ಆಧರಿಸಿಯೇ ಚಲನಚಿತ್ರ ನಿರ್ಮಾಣ ಮಾಡಲಾಗಿದೆ ಎಂದು ಸ್ಪಷ್ಟವಾಗುತ್ತಾ ಇತ್ತು. ನಟ ದರ್ಶನ್ ಹಾವಾ ಬಾವಾ, ರೇಣುಕಾಸ್ವಾಮಿ ಅಪಹರಣ ಹತ್ಯೆ ಎಲ್ಲವೂ ಘಟನೆಗೆ ಹೋಲುವಂತಿತ್ತು. ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಟ್ವಿಸ್ಟ್ – ಕ್ರಾಸ್ ಎಕ್ಸಾಮಿನ್ ವೇಳೆ ಪೊಲೀಸರ ಎಡವಟ್ಟು

ದರ್ಶನ್ ಪತ್ನಿ ವಿಜಯಲಕ್ಷ್ಮಿ ಚಲನಚಿತ್ರಕ್ಕೆ ತಡೆ ನೀಡಬೇಕು ಎಂದು ಕೋರ್ಟ್ ಮೊರೆ ಹೋಗಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಚಲನಚಿತ್ರ ಬಿಡುಗಡೆಗೆ ತಡೆ ನೀಡಿದೆ.

ಏಪ್ರಿಲ್ 14 ಕ್ಕೆ ಚಿತ್ರ ಬಿಡುಗಡೆ ಮಾಡುವುದಾಗಿ ದಿನಾಂಕವನ್ನು ಚಲನಚಿತ್ರ ತಂಡ ಘೋಷಿಸಿಕೊಂಡಿತ್ತು. ಈಗ ಕೋರ್ಟ್‌ ತಡೆಯಾಜ್ಞೆಯಿಂದ ಚಿತ್ರತಂಡಕ್ಕೆ ಸಂಕಷ್ಟ ಎದುರಾಗಿದೆ. ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಪ್ರಕರಣ – ದರ್ಶನ್ ಜೈಲು ಸೇರಿ ಒಂದು ವರ್ಷ ಪೂರ್ಣ

[ad_2]

Source link publictv.in

Leave a Reply

Your email address will not be published. Required fields are marked *