[ad_1]
1
Subashini: ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣಾಗಿ ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಅಘಾತಕಾರಿ ಘಟನೆ ನಡೆದಿದೆ.

ಮೂಲತಃ ಶ್ರೀಲಂಕಾದವರಾಗಿರುವ ಸುಭಾಷಿಣಿ ಅಲಿಯಾಸ್ ಸಾಸ್ವಿಬಾಲಾ ಅವರು ಹಲವು ಧಾರಾವಾಹಿಗಳಲ್ಲಿ ಪೋಷಕ ನಟಿಯಾಗಿ ಹಾಗೂ ಸಿನಿಮಾಗಳಲ್ಲಿ ಕಾಣಿಸಿಕೊಂಡಿದ್ದರು. 2024ರ ಏಪ್ರಿಲ್‌ನಲ್ಲಿ ಸುಭಾಷಿಣಿ ಬೆಂಗಳೂರಿನ ನಿವಾಸಿ ಬಿಪಿನ್ ಚಂದ್ರನ್ (38) ಅವರನ್ನು ವಿವಾಹವಾಗಿದ್ದರು. ಬೆಂಗಳೂರಿನಲ್ಲಿ ತಮ್ಮ ಪತಿಯೊಂದಿಗೆ ವಾಸಿಸುತ್ತಿದ್ದರು.
ಧಾರಾವಾಹಿ ಚಿತ್ರೀಕರಣಕ್ಕಾಗಿ ಚೆನ್ನೈಗೆ ಭೇಟಿ ನೀಡಿದಾಗಲೆಲ್ಲ ಅಯ್ಯಪ್ಪಂತಂಗಲ್‌ನಲ್ಲಿರುವ ಖಾಸಗಿ ವಸತಿ ಸಂಕೀರ್ಣದಲ್ಲಿರುವ ಅಪಾರ್ಟ್ಮೆಂಟ್ ಬಾಡಿಗೆಗೆ ಪಡೆಯುತ್ತಿದ್ದರು. ಚೆನ್ನೈನಲ್ಲಿ ಚಿತ್ರೀಕರಣದ ಬದ್ಧತೆಗಳಿದ್ದಾಗಲೆಲ್ಲ ಇದೇ ನಿವಾಸದಲ್ಲಿ ಉಳಿಯತ್ತಿದ್ದರು ಎಂದು ತಿಳಿದು ಬಂದಿದೆ.
ಅಂತೆಯೇ ಸಿನಿಮಾ ಚಿತ್ರೀಕರಣದ ಹಿನ್ನೆಲೆ ಚೆನ್ನೈನ (Chennai) ಪೋರೂರು ಬಳಿಯ ಅಯ್ಯಪ್ಪಂತಂಗಲ್‌ನಲ್ಲಿರುವ ಅಪಾರ್ಟ್ಮೆಂಟ್‌ವೊಂನ್ನು ಬಾಡಿಗೆ ಪಡೆದಿದ್ದರು. ಮಾ.3ಕ್ಕೆ ಆ ಮನೆಗೆ ಬಂದಿದ್ದರು. ಪೊಲೀಸರ ಮಾಹಿತಿ ಪ್ರಕಾರ, ಏ.5ರ ರಾತ್ರಿ ತಮ್ಮ ಬಾಡಿಗೆ ಅಪಾರ್ಟ್ಮೆಂಟ್‌ನಲ್ಲಿ ನಟಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೂ ಮುನ್ನ ತಮ್ಮ ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿ ಮಾತನಾಡಿದ್ದು, ಈ ವೇಳೆ ಇಬ್ಬರ ನಡುವೆ ವಾಗ್ವಾದ ನಡೆದಿದೆ. ವಿಡಿಯೋ ಕಾಲ್‌ನಲ್ಲಿ ಇರುವಾಗಲೇ ನೇಣಿಗೆ ಶರಣಾಗಿದ್ದಾರೆ.
ಇದರಿಂದ ತೀವ್ರ ಆಘಾತಕ್ಕೊಳಗಾದ ಪತಿ ಕೂಡಲೇ ವಸತಿ ಸಂಕೀರ್ಣದ ಭದ್ರತಾ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಭದ್ರತಾ ಸಿಬ್ಬಂದಿ ತಕ್ಷಣವೇ ಪೋರೂರ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಪೊಲೀಸರು ಸ್ಥಳಕ್ಕೆ ಆಗಮಿಸಿ, ಸುಭಾಷಿಣಿ ಅವರನ್ನು ಹೊರತೆಗೆದು, ಪೂನಮಲ್ಲಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅಷ್ಟಲ್ಲಿ ಸುಭಾಷಿಣಿ ಮೃತಪಟ್ಟಿದ್ದರು. ಬಳಿಕ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಿಲ್ಪಾಕ್ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಕೌಟುಂಬಿಕ ಸಮಸ್ಯೆಗಳಿಂದಾಗಿ ಸಾವಿನ ನಿರ್ಧಾರ ತೆಗೆದುಕೊಂಡಿದ್ದಾರೆಯೇ ಅಥವಾ ಬೇರೆ ಯಾವುದೇ ಕಾರಣಗಳಿವೆಯೇ ಎಂಬುದನ್ನು ನಿರ್ಧರಿಸಲು ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ.
[ad_2]
Source link


















Leave a Reply