Advertisement

ನಾಪತ್ತೆಯಾಗಿದ್ದ ಪ್ರಥಮ ದರ್ಜೆ ಕಂಟ್ರಾಕ್ಟರ್ ಶವವಾಗಿ ಪತ್ತೆ – ಕೊಲೆ ಶಂಕೆ

[ad_1]

Mandya Contractor Death copy

ಮಂಡ್ಯ: ನಾಲ್ಕು ದಿನಗಳ ಹಿಂದೆ ಕಾಣೆಯಾಗಿದ್ದ ಪ್ರಥಮ ದರ್ಜೆ ಗುತ್ತಿಗೆದಾರ (Contractor) ಅನುಮಾನಾಸ್ಪದ ರೀತಿಯಲ್ಲಿ ಕಾವೇರಿ ನದಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಮಂಡ್ಯ (Mandya) ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ (Srirangapatna) ನಡೆದಿದೆ.

ಶ್ರೀರಂಗಪಟ್ಟಣ ತಾಲೂಕಿನ ಹುಣಸನಹಳ್ಳಿ ಗ್ರಾಮದ ಪವನ್ (27) ಅನುಮಾನಸ್ಪದವಾಗಿ ಸಾವನ್ನಪ್ಪಿರುವ ಪ್ರಥಮ ದರ್ಜೆ ಗುತ್ತಿಗೆದಾರ. ಪವನ್ ಕೋಟ್ಯಂತರ ರೂ. ಮೌಲ್ಯದ ಎಲೆಕ್ಟ್ರಿಕ್ ಕಾಮಗಾರಿಯನ್ನು ನಡೆಸುತ್ತಿದ್ದ. ಏ.2ರಂದು ಮನೆಯಿಂದ ಕೆಲಸದ ಸ್ಥಳಕ್ಕೆ ಹೋಗುತ್ತೇನೆ ಎಂದು ತೆರಳಿದ್ದ ಪವನ್ ಮನೆಗೆ ವಾಪಸ್ ಬಂದಿರಲಿಲ್ಲ. ಇದನ್ನೂ ಓದಿ: ಯುದ್ಧದ ಟೆನ್ಷನ್‌ ಮಧ್ಯೆ ಇರಾನ್‌ಗೆ ದೊಡ್ಡ ಆಘಾತ – ಪ್ರಜ್ಞಾಹೀನ ಸ್ಥಿತಿಯಲ್ಲಿ ಸುಪ್ರೀಂ ಲೀಡರ್‌

ನಾಪತ್ತೆ ಬಳಿಕ ಪವನ್ ಫೋನ್ ಸ್ಪೀಚ್ ಆಫ್ ಆಗಿದ್ದು, ಸಾಮಾಜಿಕ ಜಾಲತಾಣದ ಖಾತೆಗಳು ಡಿ ಆಕ್ಟೀವ್ ಆಗಿದ್ದವು. ಬಳಿಕ ಮನೆಯವರು ಹಾಗೂ ಸ್ನೇಹಿತರು ಪವನ್‌ಗಾಗಿ ಹುಡುಕಾಟ ನಡೆಸಿದ್ದರು. ನಂತರ ಈ ಬಗ್ಗೆ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿತ್ತು. ಸೋಮವಾರ ಪವನ್ ಮೃತದೇಹ ಅನುಮಾನಸ್ಪದ ರೀತಿಯಲ್ಲಿ ಕಾವೇರಿ ನದಿಯಲ್ಲಿ ಪತ್ತೆಯಾಗಿದೆ. ಇದನ್ನೂ ಓದಿ: ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಶಾಕ್ – ರಾಜ್ಯದ 4 ಕಡೆ ಲೋಕಾಯುಕ್ತ ದಾಳಿ

ಈತನ ಸಾವಿನ ಬಗ್ಗೆ ಕುಟುಂಬಸ್ಥರು ಹಾಗೂ ಸ್ನೇಹಿತರು ಅನುಮಾನ ವ್ಯಕ್ತಪಡಿಸಿದ್ದು, ಪವನ್‌ನನ್ನು ಕೊಲೆ ಮಾಡಿ ಬಳಿಕ ನದಿಗೆ ಎಸೆಯಲಾಗಿದೆ ಎಂದು ಆರೋಪಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲು ಮಾಡಿಕೊಂಡಿರುವ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇದನ್ನೂ ಓದಿ: ಸಿಎಂ, ಮತ್ತವರ ಕುಟುಂಬಕ್ಕೆ ಶಿಕ್ಷೆ ಆಗುವುದು ನಿಶ್ಚಿತ: ಸ್ನೇಹಮಯಿ ಕೃಷ್ಣ


[ad_2]

Source link publictv.in

Leave a Reply

Your email address will not be published. Required fields are marked *