Advertisement

ರಸ್ತೆ ಅಪಘಾತದಲ್ಲಿ ಪೊಲೀಸ್ ಕಾನ್ಸ್ಟೇಬಲ್ ಸಾವು..!!

ಹುಬ್ಬಳ್ಳಿ: ನಗರದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಪೊಲೀಸ್ ಕಾನ್ಸ್ಟೇಬಲ್ ಒಬ್ಬರು ಮೃತಪಟ್ಟ ಘಟನೆ ನಡೆದಿದೆ.

ಎನ್ ಎಫ್ ಸಿದ್ದಪ್ಪನವರ ಮೃತ ಪೊಲೀಸ್ ಸಿಬ್ಬಂದಿ, ನವನಗರ ಹತ್ತಿರ ಇರುವ ಪೊಲೀಸ್ ಆಯುಕ್ತರ ಕಚೇರಿ ಸಮೀಪ ಈ ಅಪಘಾತ ಸಂಭವಿಸಿದೆ. ಹುಬ್ಬಳ್ಳಿಯಿಂದ ಧಾರವಾಡ ಕಡೆಗೆ ತೆರಳುತ್ತಿದ್ದ ಇವರ ದ್ವಿಚಕ್ರ ವಾಹನ ಸಂಖ್ಯೆ (ಕೆಎ 25 ಇಟಿ 4722) ಇದಕ್ಕೆ ಕೆಎ 22 ಎಎ 3490 ಸಂಖ್ಯೆಯ ಎಚ್‌ಪಿ ಪೆಟ್ರೋಲಿಯಂ ವಾಹನ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಉತ್ತರ ಸಂಚಾರಿ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *