Advertisement

ನಾಳೆ (ಎಪ್ರಿಲ್‌ 9) ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ: ಈ ರೀತಿ ಚೆಕ್‌ ಮಾಡಿ, ಲಿಂಕ್‌ ಇಲ್ಲಿದೆ

[ad_1]

ಬೆಂಗಳೂರು ಎ.8: ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ನಾಳೆ (ಎಪ್ರಿಲ್‌ 9) ಪ್ರಕಟಗೊಳ್ಳಲಿದೆ. ಈ ಕುರಿತು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅಧಿಕೃತ ಮಾಹಿತಿ ನೀಡಿದ್ದಾರೆ. ನಾಳೆ ರಾಜ್ಯದಲ್ಲಿ ಎರಡು ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆಯಲಿದ್ದು, ಮತದಾನ ಪ್ರಕ್ರಿಯೆ ಮುಗಿದ ನಂತರ ಸಂಜೆ ವೇಳೆ ಸಚಿವರು ಫಲಿತಾಂಶ ಘೋಷಣೆ ಮಾಡಲಿದ್ದಾರೆ.

ಫಲಿತಾಂಶ ಪ್ರಕಟಣೆಗೆ ಕುರಿತಂತೆ ಎಲ್ಲಾ ಸಿದ್ಧತೆಗಳನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಾಡಿದೆ. ಈ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆಗಳು ಫೆಬ್ರವರಿ 28ರಿಂದ ಮಾರ್ಚ್ 17ರವರೆಗೆ ರಾಜ್ಯಾದ್ಯಂತ ಯಶಸ್ವಿಯಾಗಿ ನಡೆದಿದ್ದವು. ಒಟ್ಟು 1,217 ಪರೀಕ್ಷಾ ಕೇಂದ್ರಗಳಲ್ಲಿ 7,10,363 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.

ಫಲಿತಾಂಶ ನೋಡುವುದು ಹೇಗೆ?
ಮೊದಲು ಅಧಿಕೃತ ವೆಬ್‌ಸೈಟ್ karresults.nic.in ಗೆ ಲಾಗ್ ಇನ್ ಆಗಿ.
ಮುಖಪುಟದಲ್ಲಿ ಕಾಣುವ ‘Karnataka 2nd PUC Result 2026’ ಲಿಂಕ್ ಮೇಲೆ ಕ್ಲಿಕ್ ಮಾಡಿ.
ನಿಮ್ಮ ರಿಜಿಸ್ಟ್ರೇಶನ್ ನಂಬರ್ ಮತ್ತು ಜನ್ಮ ದಿನಾಂಕವನ್ನು ನಿಖರವಾಗಿ ನಮೂದಿಸಿ.
ಮಾಹಿತಿ ಭರ್ತಿ ಮಾಡಿದ ನಂತರ ‘Submit’ ಬಟನ್ ಒತ್ತಿರಿ.
ನಿಮ್ಮ ಅಂಕಪಟ್ಟಿ ಪರದೆಯ ಮೇಲೆ ಕಾಣಿಸಲಿದೆ. ಭವಿಷ್ಯದ ಬಳಕೆಗಾಗಿ ಇದನ್ನು ಡೌನ್‌ಲೋಡ್ ಮಾಡಿ ಪ್ರಿಂಟ್ ತೆಗೆದುಕೊಳ್ಳಿ.

The post ನಾಳೆ (ಎಪ್ರಿಲ್‌ 9) ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ: ಈ ರೀತಿ ಚೆಕ್‌ ಮಾಡಿ, ಲಿಂಕ್‌ ಇಲ್ಲಿದೆ appeared first on Hosakananda.

[ad_2]

Source link

Leave a Reply

Your email address will not be published. Required fields are marked *