Advertisement

ʼಗುಜರಾತ್‌ ಜನ ಅನಕ್ಷರಸ್ಥರುʼ ಎಂದು ಹೇಳಿಕೆ ನೀಡಿದ್ದ ಖರ್ಗೆ; ಕ್ಷಮೆಯಾಚಿಸಿದ ಕಾಂಗ್ರೆಸ್‌ ಅಧ್ಯಕ್ಷ

[ad_1]

ಕೇರಳ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಗುಜರಾತ್‌ ಜನರ ಕುರಿತು ನೀಡಿದ್ದ ವಿವಾದಾತ್ಮಕ ಹೇಳಿಕೆಗೆ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕ್ಷಮೆಯಾಚಿಸಿದ್ದಾರೆ. ನನ್ನ ಹೇಳಿಕೆಗಳನ್ನು ಉದ್ದೇಶಪೂರ್ವಕವಾಗಿಯೇ ತಿರುಚಲಾಗಿದೆ, ನಾನು ಕ್ಷಮೆಯಾಚಿಸುತ್ತೇನೆ ಎಂದು ಅವರು ಹೇಳಿದ್ದಾರೆ.

ಗುಜರಾತ್‌ ಜನರ ಭಾವನೆಗಳನ್ನು ನೋಯಿಸುವ ಉದ್ದೇಶವನ್ನು ನಾವು ಎಂದೂ ಹೊಂದಿಲ್ಲ. ಗುಜರಾತ್‌ ಜನರ ಬಗ್ಗೆ ಯಾವಾಗಲೂ ಗೌರವವಿದೆ ಮತ್ತು ಮುಂದೆಯೂ ಇರುವುದಾಗಿ ಅವರು ಹೇಳಿದ್ದಾರೆ. ಕೇರಳದ ಇಡುಕ್ಕಿ ಜಿಲ್ಲೆಯಲ್ಲಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಖರ್ಗೆ, ಕೇರಳದ ಜನರ ಶಿಕ್ಷಣ ಮತ್ತು ಬುದ್ಧಿವಂತಿಕೆಯನ್ನು ಶ್ಲಾಘನೆ ಮಾಡಿದರು.

ಗುಜರಾತ್ ಮತ್ತು ಇತರ ಸ್ಥಳಗಳಲ್ಲಿರುವಂತೆ, ಕಡಿಮೆ ಶಿಕ್ಷಣ ಹೊಂದಿರುವವರನ್ನು ಮೂರ್ಖರನ್ನಾಗಿಸಬಹುದು ಎಂದು ಪ್ರಧಾನಿ ಮೋದಿ ಅವರನ್ನು ಗುರಿಯಾಗಿಸಿಕೊಂಡು ಅವರು ಟೀಕಿಸಿದ್ದರು. ಕೇರಳದ ಮತದಾರರನ್ನು ದಾರಿ ತಪ್ಪಿಸುವುದು ಅಸಾಧ್ಯ ಎಂದು ಅವರು ಹೇಳಿದ್ದರು.

ಈ ಹೇಳಿಕೆಯ ನಂತರ, ಭಾರತೀಯ ಜನತಾ ಪಕ್ಷವು ಕಾಂಗ್ರೆಸ್ ವಿರುದ್ಧ ಹೋರಾಟ ಆರಂಭಿಸಿತು. ಇದು ಕಾಂಗ್ರೆಸ್‌ನ ಒಡೆದು ಆಳುವ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ ಎಂದು ಬಿಜೆಪಿ ವಕ್ತಾರ ಶಹಜಾದ್ ಪೂನಾವಾಲಾ ಹೇಳಿದ್ದರು. ಹಿರಿಯ ನಾಯಕ ರವಿಶಂಕರ್ ಪ್ರಸಾದ್ ಈ ಹೇಳಿಕೆಯನ್ನು ನಾಚಿಕೆಗೇಡಿನ ಸಂಗತಿ ಎಂದು ಕರೆದರು.

banner



[ad_2]

Source link

Leave a Reply

Your email address will not be published. Required fields are marked *