[ad_1]

ಬೆಂಗಳೂರು: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ, ಬೆಂಗಳೂರು ಜಲಮಂಡಳಿ, ಕೃಷಿ ಮಾರಾಟ ಇಲಾಖೆ ಸೇರಿದಂತೆ ವಿವಿಧ ನಿಗಮ/ಮಂಡಳಿಗಳ ಮೂಲ ವೃಂದ ಹಾಗೂ ಕಲ್ಯಾಣ ಕರ್ನಾಟಕ ವೃಂದದ ವಿವಿಧ ಹುದ್ದೆಗಳ ನೇಮಕಕ್ಕೆ ಲಿಖಿತ ಪರೀಕ್ಷೆ ಗಳ ವೇಳಾಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (Karnataka Examination Authority) ಪ್ರಕಟಿಸಿದೆ.
ಮೂಲ ವೃಂದದ ಹುದ್ದೆಗಳಿಗೆ ಏಪ್ರಿಲ್ 26 ಮತ್ತು ಮೇ 10ರಂದು ಹಾಗೂ ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳಿಗೆ ಏಪ್ರಿಲ್ 27 ಹಾಗೂ ಮೇ 9ರಂದು ಪರೀಕ್ಷೆ ನಡೆಸಲಾಗುವುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.
ಹೆಚ್ಚಿನ ವಿವರಗಳಿಗೆ ಕೆಇಎ (KEA) ವೆಬ್ ಸೈಟ್ ನೋಡಲು ಅವರು ಕೋರಿದ್ದಾರೆ.
[ad_2]
Source link publictv.in

















Leave a Reply