Advertisement

Education Dept : 1ನೇ ತರಗತಿ ಪ್ರವೇಶ ವಯೋಮಿತಿ ಸಡಿಲಿಕೆ ವಿಚಾರ

[ad_1]

Education Dept : ಶಾಲಾ ದಾಖಲಾತಿ ವಯಸ್ಸಿನ ಮಿತಿಯ ವಿಚಾರವಾಗಿ  ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ಒಂದನೇ ತರಗತಿ ಪ್ರವೇಶಕ್ಕೆ ಕಡ್ಡಾಯವಾಗಿ 6 ವರ್ಷ ತುಂಬಿರಬೇಕು ಎಂಬ ನಿಯಮದಲ್ಲಿ ಸಡಿಲಿಕೆ ಮಾಡಿದೆ. ಈ ಸಂಬಂಧ ವಯೋಮಿತಿ ಸಡಿಲಿಕೆ ಮಾಡಿ ಕರ್ನಾಟಕ ಸರ್ಕಾರ ಇದೀಗ ಅಧಿಕೃತ ಆದೇಶ ಹೊರಡಿಸಿದೆ

ಒಂದನೇ ತರಗತಿಗೆ ಪ್ರವೇಶ ಪಡೆಯಲು ಜೂನ್ 1ಕ್ಕೆ ಮಗುವಿಗೆ 6 ವರ್ಷ ತುಂಬಿರಬೇಕು ಎಂಬ ನಿಯಮವಿತ್ತು. ಆದರೆ ಇದೀಗ ಒಂದನೇ ತರಗತಿಗೆ ಪ್ರವೇಶ ಪಡೆಯುವ ಮಗುವಿಗೆಈ ಬಾರಿ 60 ದಿನಗಳ ರಿಯಾಯಿತಿ ನೀಡಲಾಗಿದೆ. ಅಂದರೆ, ನಿಗದಿತ ದಿನಾಂಕಕ್ಕೆ ಎರಡು ತಿಂಗಳು ಬಾಕಿ ಇರುವ ಮಕ್ಕಳಿಗೂ ಒಂದನೇ ತರಗತಿಗೆ ಪ್ರವೇಶ ಪಡೆಯಲು ಅವಕಾಶ ಸಿಗಲಿದೆ ಎಂದು ಮಧು ಬಂಗಾರಪ್ಪ ತಿಳಿಸಿದ್ದರು. ಸದ್ಯ ಸರ್ಕಾರ ಈ ಕುರಿತು ಅಧಿಕೃತವಾಗಿ ಆದೇಶ ಹೊರಡಿಸಿದೆ. ಇನ್ನು ಆದೇಶದಲ್ಲಿ ಈ ವರ್ಷಕ್ಕೆ ಮಾತ್ರ ಅನ್ವಯ ಎಂಬ ನಿಯಮ ವಿಧಿಸಲಾಗಿದೆ.

  1. ಈ ಬಗ್ಗೆ ಟ್ವೀಟ್‌ ಮಾಡಿರುವ ರಾಜ್ಯ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು, ” 2026 – 27ನೇ ಶೈಕ್ಷಣಿಕ ಸಾಲಿಗೆ ಸೀಮಿತವಾಗಿ ಒಂದನೇ ತರಗತಿಗೆ ಮಕ್ಕಳನ್ನು ದಾಖಲು ಮಾಡಿಕೊಳ್ಳುವ ಸಂದರ್ಭದಲ್ಲಿ, ಶೈಕ್ಷಣಿಕ ವರ್ಷದ ಜೂನ್‌ 1 ರಿಂದ ಗರಿಷ್ಠ 60 ದಿನಗಳ ಸಡಿಲಿಕೆಯನ್ನು ನೀಡಿ ಮಗುವಿನ ವಯಸ್ಸನ್ನು ಲೆಕ್ಕಹಾಕಿ ಶಾಲಾ ದಾಖಲಾತಿಗೆ ಪರಿಗಣಿಸುವಂತೆ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ. ಇದರಿಂದ ಮಗುವಿನ ಜನ್ಮದಿನವು ಜೂನ್ 1ರಿಂದ ಮುಂದಿನ 60 ದಿನಗಳ ಒಳಗಿದ್ದರೆ (ಜುಲೈ 30ರ ವರೆಗೆ), ಅಂತಹ ಮಕ್ಕಳನ್ನು 1ನೇ ತರಗತಿಗೆ ದಾಖಲಿಸಿಕೊಳ್ಳಲು ಅವಕಾಶ ಕಲ್ಪಿಸಿದಂತಾಗಿದೆ. ಪೋಷಕರು ಸಲ್ಲಿಸಿದ ಮನವಿಗಳನ್ನು ಪುರಸ್ಕರಿಸಿ, ಕರ್ನಾಟಕ ಶಿಕ್ಷಣ ಅಧಿನಿಯಮ 1983ರ ಕಲಂ 20ರ ಅಡಿಯಲ್ಲಿ ಈ ವಿಶೇಷ ಅವಕಾಶವನ್ನು ಕಲ್ಪಿಸಲಾಗಿದೆ ” ಎಂದು ತಿಳಿಸಿದೆ.



[ad_2]

Source link

Leave a Reply

Your email address will not be published. Required fields are marked *