[ad_1]
ಬೆಂಗಳೂರು: ಶಾಮನೂರು ಶಿವಶಂಕರಪ್ಪ ನಿಧನದಿಂದ ತೆರವಾಗಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಮರ್ಥ್ ಸೋಲಿಸಲು ಪಕ್ಷದ ಹಿರಿಯ ಮುಖಂಡರು ದೊಡ್ಡ ಷಡ್ಯಂತ್ರ ಮಾಡಿದ್ದಾರೆ ಎಂದು ವಿಧಾನ ಪರಿಷತ್ತಿನ ಆಡಳಿತ ಪಕ್ಷದ ಮುಖ್ಯ ಸಚೇತಕ ಸಲೀಂ ಅಹ್ಮದ್ ದೂರಿದ್ದಾರೆ.
ದಾವಣಗೆರೆ: ಸತತ ಕುಸಿತ ಬಳಿಕ ಭರ್ಜರಿ ಚೇತರಿಕೆ ಕಂಡ ಅಡಿಕೆ ರೇಟ್
ಷಡ್ಯಂತ್ರ ಬಗ್ಗೆ ಕೆಪಿಸಿಸಿ, ಮುಖ್ಯಮಂತ್ರಿಗೆ ಮಾಹಿತಿ
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಸಿಎಂ, ಡಿಸಿಎಂ ನಮಗೆ ಕೊಟ್ಟ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ಮಾಡಿದ್ದೇವೆ. ಆದರೆ, ಪಕ್ಷದ ಹಿರಿಯ ಮುಖಂಡರು ಪಕ್ಷವನ್ನು ಸೋಲಿಸಲು ದೊಡ್ಡ ಷಡ್ಯಂತ್ರ ಮಾಡಿದ್ದಾರೆ. ಈ ಬಗ್ಗೆ ಎಐಸಿಸಿ ಹಾಗೂ ಕೆಪಿಸಿಸಿ ಅಧ್ಯಕ್ಷರು ಮತ್ತು ಮುಖ್ಯಮಂತ್ರಿಯವರಿಗೆ ಮಾಹಿತಿಯಿದೆ ಎಂದು ತಿಳಿಸಿದರು.
ಎಲ್ಲ ಅಲ್ಪಸಂಖ್ಯಾತ ಸಮುದಾಯದ ಮುಖಂಡರ ಒಪ್ಪಿಗೆ ಮೇರೆಗೆ ಸಮರ್ಥ್ ಮಲ್ಲಿಕಾರ್ಜುನ ಅವರಿಗೆ ಟಿಕೆಟ್ ನೀಡಲಾಯಿತು. ನಮ್ಮನ್ನೆಲ್ಲಾ ಕೂರಿಸಿಕೊಂಡಿ ಒಪ್ಪಿಗೆ ಪಡೆಯಲಾಯಿತು. ಆದರೂ ಒಂದಷ್ಟು ತಪ್ಪು ಗ್ರಹಿಕೆ ಉಂಟಾಯಿತು. ಕೆಪಿಸಿಸಿ ಅಧ್ಯಕ್ಷರು, ಮುಖ್ಯಮಂತ್ರಿಯವರು ಎಲ್ಲ ಅಲ್ಪಸಂಖ್ಯಾತ ನಾಯಕರಿಗೆ ಜವಾಬ್ದಾರಿ ನೀಡಿದ್ದರು. ಜೊತೆಗೆ ನನಗೆ ಹಾಗೂ ಶಾಸಕ ರಿಝ್ವಾನ್ ಆರ್ಶದ್ ಅವರಿಗೆ ಇತರೇ ಜವಾಬ್ದಾರಿ ನೀಡಿದ್ದರು. ಅದನ್ನು ಸುಸೂತ್ರವಾಗಿ ನಾವು ಮಾಡಿದ್ದೇವೆ ಎಂದರು.
ಈ ಚುನಾವಣೆಯಲ್ಲಿ ವಿಶೇಷವಾಗಿ
ದಾವಣಗೆರೆ: ಪಿಯುಸಿ ಫಲಿತಾಂಶ; ನವ್ಯಾ ಜಿನ್ನಪ್ಪಾ ಜಿಲ್ಲೆಗೆ ಪ್ರಥಮ
ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಶಾಮನೂರು ಶಿವಶಂಕರಪ್ಪ ಅವರು ಕೈಗೊಂಡಿದ್ದ ಅಭಿವೃದ್ಧಿ ಕೆಲಸಗಳು ಪಕ್ಷದ ಕೈ ಹಿಡಿಯಲಿದೆ. ವಿರೋಧ ಪಕ್ಷಗಳು ನಮ್ಮ ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಪ್ರಚಾರ ಮಾಡಿದರು. ಆದರೂ ಉಪಚುನಾವಣೆ ನಡೆಯುವ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲುವ ವಿಶ್ವಾಸ ಇದೆ ಎಂದರು.
ಜಮೀರ್ ಅಹಮ್ಮದ್ ಖಾನ್ ಕೈಕೊಟ್ಟಿದ್ದಕ್ಕೆ ಪರಿಸ್ಥಿತಿ ಕೈ ಮೀರಿದಾಗ ಸಾದಿಕ್ನನ್ನ ಮನವೊಲಿಸಲು ರಿಜ್ವಾನ್ ಅರ್ಷದ್ ಮತ್ತು ಸಲೀಂ ಅಹ್ಮದ್ಗೆ ಜಬಾವ್ದಾರಿ ಕೊಡಲಾಗಿತ್ತು. ಸಿಎಂ, ಡಿಸಿಎಂ ಸೂಚನೆಯಂತೆಯೇ ಮುನಿಸು ಶಮನ ಮಾಡೋ ಕೆಲಸ ಇವರಿಬ್ಬರು ಮಾಡಿದ್ದರು. ಇದೀಗ ಜಮೀರ್ ವಿರುದ್ಧ ಕೆಲ ಮುಸ್ಲಿಂ ನಾಯಕರು ಸಿಡಿದೆದ್ದಿದ್ದು, ಸೂಕ್ತ ಕ್ರಮಕೈಗೊಳ್ಳುವಂತೆ ಹೈಕಮಾಂಡ್ಗೆ ದೂರು ನೀಡಿದ್ದಾರೆ.
ಸಚಿವ ಜಮೀರ್ ವಿರುದ್ಧ ಗರಂ
ಟಿಕೆಟ್ ಘೋಷಣೆಯಾದ ಬಳಿಕ ಜಮೀರ್ ಅಹಮ್ಮದ್ ಖಾನ್ ದಾವಣಗೆರೆ ಕಡೆ ಮುಖ ಹಾಕಿಲ್ಲ. ಕೇರಳ ಚುನಾವಣೆ ನೆಪ ಮಾಡಿಕೊಂಡು ಅಲ್ಲಿಯೇ ಠಿಕಾಣಿ ಹೂಡಿದ್ದರು. ಇತ್ತ ಅಭಿಮಾನಿಗಳು ಹಾಗೂ ಮುಸ್ಲಿಂ ಕಾರ್ಯಕರ್ತರು ಜಮೀರ್ ಕರೆಯಿಸಿ ಎಂದು ಡಿಕೆಶಿ, ಸಿದ್ದರಾಮಯ್ಯ ಹೋದಲೆಲ್ಲ ಪಟ್ಟು ಹಿಡಿದಿದ್ದರು. ಕೊನೆಗೆ ಸಿಎಂ ಸೂಚನೆಯಂತೆ ಜಮೀರ್ ಕೇಳದಿಂದ ದಾವಣಗೆರೆಗೆ ಹಾರಿಬಂದಿದ್ದು, ಎಸ್ಎಸ್ ಮಲ್ಲಿಕಾರ್ಜುನ ಮನೆಯಲ್ಲಿ ಊಟ ಸವಿದು ತಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಹಿಂಬಾಗಿಲಿನಿಂದ ಹೋಗಿದ್ದು, ಮತ್ತೆ ದಾವಣಗೆರೆ ಕಡೆ ತಲೆ ಹಾಕಲೇ ಇಲ್ಲ. ಆದ್ರೆ, ದಾವಣಗೆರೆಯಲ್ಲಿ ಪ್ರಚಾರ ಮಾಡದೇ ನೇರವಾಗಿ ಬಾಗಲಕೋಟೆಯಲ್ಲಿ ಎರಡು ದಿನ ಅಬ್ಬರದ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದರು. ಇದು ಸಹ ಕೆಲ ನಾಯಕರ ಕೋಪಕ್ಕೆ ಕಾರಣವಾಗಿದೆ.
[ad_2]
Source link

















Leave a Reply