[ad_1]
ಬೆಳ್ತಂಗಡಿ: ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರಿನ ಮಾನ್ವಿ ತಾಲೂಕಿಗೆ ಮೂರನೇ ಬಾರಿಗೆ ಗಡೀಪಾರು ಮಾಡಿ ಹೊರಡಿಸಿರುವ ಆದೇಶವನ್ನು ಎ.16 ರವರೆಗೆ ಜಾರಿ ಮಾಡದಂತೆ ಹೈಕೋರ್ಟ್, ಸರಕಾರ ಮತ್ತು ಪುತ್ತೂರು ಉಪ ವಿಭಾಗಾಧಿಕಾರಿಗೆ ಸೂಚಿಸಿದೆ.
ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ತಂದ ಆರೋಪದ ಮೇರೆಗೆ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಗೆ ಆರು ತಿಂಗಳ ಕಾಲ ಗಡೀಪಾರು ಮಾಡಿ ಮಾರ್ಚ್ 13ರಂದು ಪುತ್ತೂರು ಉಪ ವಿಭಾಗಾಧಿಕಾರಿ ಆದೇಶಿಸಿದ್ದರು. ಈ ಆದೇಶ ರದ ಪಡಿಸಬೇಕು ಎಂದು ಕೋರಿ ತಿಮರೋಡಿ ಸಲ್ಲಿಸಿದ್ದ ಅರ್ಜಿಯು ಎ.10ರಂದು ನ್ಯಾ. ಸಚಿನ್ ಶಂಕರ್ ಮಗದುಂ ಅವರಿದ್ದ ಏಕಸದಸ್ಯ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ಅರ್ಜಿದಾರ ಪರ ವಕೀಲರು, “ಅರ್ಜಿ ವಿಚಾರಣೆಯನ್ನು ಏ.24 ಅಥವಾ 27ಕ್ಕೆ ಮುಂದೂಡಬೇಕು. ಅಲ್ಲಿಯವರೆಗೆ ಗಡೀಪಾರು ಆದೇಶ ಜಾರಿಗೆ ತಾತ್ಕಾಲಿಕ ತಡೆ ಹೊರಡಿಸಿರುವ ನೀಡಿ ಮಧ್ಯಂತರ ಆದೇಶವನ್ನು ಮುಂದುವರಿಸಬೇಕು,” ಎಂದು ಕೋರಿದರು.
ಅಡ್ವಕೇಟ್ ಜನರಲ್ ಕೆ.ಶಶಿಕಿರಣ್ ಶೆಟ್ಟಿ “ಇದು ಮೂರನೇ ಸುತ್ತಿನ ವ್ಯಾಜ್ಯವಾಗಿದೆ. ಅರ್ಜಿದಾರರನ್ನು ಗಡೀಪಾರು ಮಾಡಿ ಮೂರನೇ ಬಾರಿಗೆ ಆದೇಶ ಹೊರಡಿಸಲಾಗಿದೆ. ಪ್ರಕರಣ ಸಂಬಂಧ ಮೇಲ್ಮನವಿ ಪ್ರಾಧಿಕಾರದಲ್ಲಿ ಪರಿಹಾರ ಅರ್ಜಿದಾರರಿಗೆ ಕಂಡುಕೊಳ್ಳಲು ಅವಕಾಶವಿದೆ.
ಅರ್ಜಿದಾರರು ರೌಡಿಶೀಟರ್ ಆಗಿದ್ದು, ಅವರ ವಿರುದ್ಧ 26 ಪ್ರಕರಣಗಳು ದಾಖಲಾಗಿವೆ. ಈ ಹಿಂದೆ ಗಡೀಪಾರು ವಿಚಾರವಾಗಿ ಹೈಕೋರ್ಟ್ ಏಕಸದಸ್ಯ ಪೀಠ ವಿಚಾರಣೆ ನಡೆಸಿ ಆದೇಶ ಮಾಡಿದೆ,” ಎಂದು ತಿಳಿಸಿದರು.
The post ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು ಆದೇಶಕ್ಕೆ ಜಾರಿಗೆ ಹೈಕೋರ್ಟ್ ತಡೆ appeared first on Hosakananda.
[ad_2]
Source link

















Leave a Reply