Advertisement

ಪಶುವೈದ್ಯೆ ಕೊಂದಿದ್ದ ನೀರಾನೆಗೆ ಬಹು ಅಂಗಾಂಗ ವೈಫಲ್ಯ – ಮರಿ ಗರ್ಭದಲ್ಲೇ ಸಾವು

[ad_1]

Tyavarekoppa Hippopotamus Shivamogga

ಶಿವಮೊಗ್ಗ: ತ್ಯಾವರೆಕೊಪ್ಪದ (Tyavarekoppa) ಮೃಗಾಲಯದಲ್ಲಿ ಪಶುವೈದ್ಯೆ ಸಮೀಕ್ಷಾ (Dr.Samiksha) ಅವರ ಮೇಲೆ ದಾಳಿ ಮಾಡಿ ಕೊಂದಿದ್ದ ನೀರಾನೆ (Hippopotamus) ಹಂಸಿನಿಯ ಮರಿ ಗರ್ಭದಲ್ಲೇ ಸಾವನ್ನಪ್ಪಿದೆ. ಇದರಿಂದ ಗರ್ಭಕೋಶದ ಸೋಂಕು ಅದರ ದೇಹಕ್ಕೆ ವ್ಯಾಪಿಸಿ ಬಹು ಅಂಗಾಂಗ ವೈಫಲ್ಯವಾಗಿರುವ ಶಂಕೆ ವ್ಯಕ್ತವಾಗಿದೆ.

ನೀರಾನೆಯ ಆರೋಗ್ಯದಲ್ಲಿ ವ್ಯತ್ಯಯ ಉಂಟಾಗಿದ್ದು, ಬನ್ನೇರುಘಟ್ಟ ಮತ್ತು ಮೈಸೂರಿನಿಂದ ಆಗಮಿಸಿದ್ದ ತಜ್ಞ ವೈದ್ಯರು 2 ದಿನ ತಪಾಸಣೆ ನಡೆಸಿದ್ದಾರೆ. ಸ್ಯಾಂಪಲ್ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಿದ್ದಾರೆ. ನೀರಾನೆ ಬಹು ಅಂಗಾಂಗ ಸೋಂಕಿಗೆ ತಜ್ಞ ವೈದ್ಯರಿಂದ ಚಿಕಿತ್ಸೆ ಕೂಡ ಆರಂಭಿಸಲಾಗಿದೆ.‌ ಇದನ್ನೂ ಓದಿ: ಬನ್ನೇರುಘಟ್ಟದ ಆನೆ ಮರಿಗೆ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಹೆಸರು

ಕಳೆದ ತಿಂಗಳು ಡಾ.ಸಮೀಕ್ಷಾ ಅವರ ಮೇಲೆ ಹಂಸಿನಿ ದಾಳಿ ಮಾಡಿತ್ತು. ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವೈದ್ಯೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದರು. ಇದನ್ನೂ ಓದಿ: ಯುವ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಸಾವಿಗೆ ನ್ಯಾಯ: ಈಶ್ವರ್‌ ಖಂಡ್ರೆ ಭರವಸೆ

[ad_2]

Source link publictv.in

Leave a Reply

Your email address will not be published. Required fields are marked *