Advertisement

ಪತ್ನಿ ಸೌಮ್ಯ ಶೆಟ್ಟಿಗೆ 14 ದಿನಗಳ ನ್ಯಾಯಾಂಗ ಬಂಧನ!

[ad_1]

ಉಡುಪಿ, ಎ.12: ಉದ್ಯಮಿ ಸುದೀಪ್‌ ರೈ ಆತ್ಮಹತ್ಯೆ ಪ್ರಕರಣಕ್ಕೆ ಕುರಿತಂತೆ ಆತನ ಪತ್ನಿ ಸೌಮ್ಯ ಶೆಟ್ಟಿ ಮೇಲೆ ಹಲವು ಆರೋಪಗಳು ಕೇಳಿ ಬಂದಿದ್ದು, ಸುದೀಪ್‌ ಜೊತೆಗೆ ಎರಡನೇ ಮದುವೆಯಾಗಿದ್ದ ಈಕೆ ಕಿರುಕುಳ ನೀಡಿ ಆತ್ಮಹತ್ಯೆಗೆ ಪ್ರಚೋದನೆ ಮಾಡಿದ್ದಾಳೆ ಎಂದು ಸುದೀಪ್‌ ರೈ ತಂದೆ ದಾಮೋದರ ಶೆಟ್ಟಿ ಕೇಸು ದಾಖಲು ಮಾಡಿದ್ದು, ಸೌಮ್ಯ ತನ್ನ ಮೇಲಿನ ಆರೋಪಗಳನ್ನು ಅಲ್ಲಗಳೆದರೂ ಇದೀಗ ಪ್ರಾಥಮಿಕ ತನಿಖೆಯಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಸೌಮ್ಯಾಳನ್ನು ಕಾರ್ಕಳ ಪೊಲೀಸರು ಬಂಧನ ಮಾಡಿದ್ದು, ನ್ಯಾಯಾಲಯವು ಆರೋಪಿ ಸೌಮ್ಯಾಳಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ಕಾರ್ಕಳ ನಗರ ಪೊಲೀಸ್‌ ಠಾಣೆಯ ಪ್ರಭಾರ ಪೊಲೀಸ್‌ ನಿರೀಕ್ಷಕ ಮಂಜಪ್ಪ ಅವರ ನೇತೃತ್ವದಲ್ಲಿ ತನಿಖೆ ನಡೆಸಲಾಗಿದ್ದು, ಪ್ರಾಥಮಿಕ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ವಿಚಾರಣೆ ವೇಳೆ ಸೌಮ್ಯ ಶೆಟ್ಟಿ ವಿರುದ್ಧದ ಆರೋಪಗಳು ದೃಢಪಟ್ಟ ಹಿನ್ನೆಲೆಯಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.



[ad_2]

Source link

Leave a Reply

Your email address will not be published. Required fields are marked *