Advertisement

ಹರಿಹರ ಪಂಚಮಸಾಲಿ ಪೀಠದಿಂದ ವಚನಾನಂದ ಶ್ರೀ ಉಚ್ಚಾಟನೆ- ಟ್ರಸ್ಟಿಗಳ ಸಭೆಯಲ್ಲಿ ಮಹತ್ವದ ನಿರ್ಧಾರ

[ad_1]

Harihar :ನಾಡಿನ ಖ್ಯಾತ ಮಠಗಳಲ್ಲಿ ಒಂದಾದ ಹರಿಹರದ ಪಂಚಮಸಾಲಿ ಮಠದ ಪೀಠಾಧ್ಯಕ್ಷರಾದ ವಚನಾನಂದ ಶ್ರೀಗಳನ್ನು ಪಂಚಮಸಾಲಿ ಪೀಠದಿಂದ ಉಚ್ಚಾಟನೆ ಮಾಡಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ

ಹರಿಹರ ತಾಲೂಕಿನ ಹನಗವಾಡಿ ಬಳಿಯ ಗುರಪೀಠದಲ್ಲಿ ನಡೆದ ಧರ್ಮದರ್ಶಿ ಸಭೆಯಲ್ಲಿ 12 ಜನ ಧರ್ಮದರ್ಶಿಗಳಿಂದ ಅಂತಿಮ ನಿರ್ಧಾರ ಕೈಗೊಳ್ಳಲಾಗಿದ್ದು, ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದಿಂದ ವಚನಾನಂದ ಶ್ರೀ ಅವರನ್ನು ಪದಚ್ಯುತಿ ಮಾಡಿರುವ ಬಗ್ಗೆ ಹರಿಹರ ಪಂಚಮಸಾಲಿ ಪೀಠದ ಟ್ರಸ್ಟಿ ಬಸವರಾಜ ದಿಂಡೂರ ಅವರು ಮಾಹಿತಿ ನೀಡಿದ್ದಾರೆ.

ಸಭೆಯ ಬಳಿಕ ಮಾತನಾಡಿದ ಟ್ರಸ್ಟಿ ಬಸವರಾಜ ದಿಂಡೂರ ಅವರು “ಸ್ವಾಮೀಜಿಗಳನ್ನು ತೆಗೆದು ಹಾಕಲು ಸರ್ವ ಟ್ರಸ್ಟಿಗಳ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದ ವಚನಾನಂದ ಶ್ರೀಗಳು ಪೀಠಾರೋಹಣದ ಸಂದರ್ಭದಲ್ಲಿ ತಿಳಿಸಿದಂತೆ ಬೆಂಗಳೂರಿನ ಶ್ವಾಸ ಯೋಗ ಪೀಠವನ್ನು ತ್ಯಜಿಸಬೇಕು ಎಂದು ಹಲವು ಬಾರಿ ಗಡುವು ನೀಡಲಾಗಿತ್ತು. ಈ ಬಗ್ಗೆ ಅವರು ಯಾವುದೇ ಮಾಹಿತಿ ನೀಡಿದ ಕಾರಣ ಅವರನ್ನು ಪೀಠದಿಂದ ತೆಗೆದುಹಾಕುವ ನಿರ್ಣಯ ತೆಗೆದುಕೊಳ್ಳಲಾಗಿದೆ’ ಎಂದು  ತಿಳಿಸಿದ್ದಾರೆ. 

ಟ್ರಸ್ಟಿಗಳ ಸಭೆ ಬಳಿಕ ಮಾಹಿತಿ ನೀಡಿರುವ ಟ್ರಸ್ಟಿ ಜಿ.ಪಿ.ಪಾಟೀಲ್, ಇದು ಟ್ರಸ್ಟ್ ವೈಯಕ್ತಿಕ ನಿರ್ಧಾರ ಅಲ್ಲ, ಸಮಾಜದ ನಿರ್ಧಾರ. ಸ್ವಾಮೀಜಿಗಳು ನಮ್ಮನ್ನು ಒಳಗೆ ಕರೆಯೋಕೆ ತಯಾರಿಲ್ಲ, ಶ್ವಾಸಗುರು ಪೀಠ ಬಿಡದೇ ಇರೋದು ಮುಖ್ಯ ಕಾರಣ. ಉಳಿದ ಕಾರಣ ಏನು ಎಂಬುದನ್ನು ಸದ್ಯದಲ್ಲೇ ಹೇಳುತ್ತೇವೆ ಎಂದು ಟ್ರಸ್ಟಿ ಜಿ.ಪಿ.ಪಾಟೀಲ್ ಹೇಳಿದ್ದಾರೆ.

banner

ಆರೋಪ ಏನು?

ಸರ್ಕಾರದಿಂದ (Karnataka Government) 2008 ರಿಂದ ಬಂದ ಅನುದಾನ ಹಾಗೂ ಭಕ್ತರ ದೇಣಿಗೆ ಹಣವನ್ನ ಟ್ರಸ್ಟಿಗಳು ದುರ್ಬಳಕೆ ಮಾಡಿಕೊಂಡಿದ್ದಾರೆ. ಪ್ರಧಾನ ಧರ್ಮಧರ್ಶಿ ಬಿಸಿ ಉಮಾಪತಿ, ಟ್ರಸ್ಟಿ ಚಂದ್ರಶೇಖರ್ ಪೂಜಾರ್ ಸೇರಿದಂತೆ ಹಲವು ಟ್ರಸ್ಟಿಗಳ ವಿರುದ್ಧ ಹಣ ದುರ್ಬಳಕೆ ಆರೋಪ ಹೊರಿಸಲಾಗಿದೆ. ಕಳೆದ ಕೆಲ ದಿನಗಳ ಹಿಂದೆ ನಡೆದ ಟ್ರಸ್ಟಿಗಳ ಸಭೆಯಲ್ಲಿ ಗಲಾಟೆಯಾಗಿ ಆಡಳಿತಾಧಿಕಾರಿ ಮೇಲೆ ಹಲ್ಲೆ ನಡೆದಿತ್ತು. ಲೆಕ್ಕ ಕೇಳಿದ್ದಕ್ಕೆ ಟ್ರಸ್ಟಿಗಳೇ ಆಡಳಿತಾಧಿಕಾರಿ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆಡಳಿತಾಧಿಕಾರಿ ರಾಜ್‌ಕುಮಾರ್‌ ಆರೋಪಿಸಿದ್ದರು. ಅಂದಿನಿಂದ ಲೆಕ್ಕ ಕೊಡಿ ಅಭಿಯಾನ ಆರಂಭಿಸಲಾಗಿತ್ತು.

ಮಠದ ಒಳಗೆ ಟ್ರಸ್ಟಿಗಳ ಸಭೆ ನಡೆಯುತ್ತಿದ್ದರೆ, ಹೊರಗಡೆ ಮಠದ ಭಕ್ತರಿಂದ ಲೆಕ್ಕ ಕೊಡಿ ಅಭಿಯಾನ ನಡೆಯಿತು. ಮಠದ ಆವರಣದಲ್ಲಿ ಭಾರಿ ಹೈಡ್ರಾಮ ನಡೆಯಿತು. ಮಾಜಿ ಶಾಸಕ ಎಚ್.ಎಸ್.ಶಿವಶಂಕರ್ ನೇತೃತ್ವದಲ್ಲಿ ಮಠದ ಭಕ್ತರು ಲೆಕ್ಕ ಕೊಡಿ ಎಂದು ಮಠದ ಟ್ರಸ್ಟಿಗಳನ್ನು ಆಗ್ರಹಿಸಿದರು. ಮಠದ ಆವರಣದಲ್ಲಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು. 



[ad_2]

Source link

Leave a Reply

Your email address will not be published. Required fields are marked *