ಬೆಳ್ತಂಗಡಿ: ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಬಳಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿ, ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಎ.11ರಂದು ಸಂಜೆ ತಿಪಟೂರಿನ ನರೇಂದ್ರ ಅವರು, ಸ್ನಾನಘಟ್ಟದ ಬಳಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಅವರನ್ನು ರಕ್ಷಿಸಿ ಮಂಗಳೂರಿನ ವೆನ್ಸಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
The post ಪೆಟ್ರೋಲ್ ಸುರಿದು ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಸಾವು appeared first on Hosakananda.

















Leave a Reply