Advertisement

ಬೆಳ್ತಂಗಡಿ: ರೆಂಕೆದ ಗುತ್ತು ಆಶ್ರಯ ಕಾಲೊನಿ ಮುಖ್ಯ ರಸ್ತೆಯಲ್ಲಿ ಅಪಾಯಕಾರಿ ಗುಂಡಿಗಳು ಸಾರ್ವಜನಿಕರ ಆಕ್ರೋಶ

[ad_1]

ಕಳೆದ ಹಲವು ದಿನಗಳಿಂದ ರಸ್ತೆಯಲ್ಲಿ ಅಪಾಯಕಾರಿ ಗುಂಡಿಗಳು ಬಿದ್ದಿದ್ದರೂ, ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದಿರುವುದು ಸಾರ್ವಜನಿಕರ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ.

ಈ ಬಗ್ಗೆ ಹಲವು ಬಾರಿ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.ಈ ರಸ್ತೆಯಲ್ಲೇ ಪ್ರತಿನಿತ್ಯ ನೂರಾರು ಶಾಲಾ ಮಕ್ಕಳು ಮತ್ತು ಸಾರ್ವಜನಿಕರು ಸಂಚರಿಸುತ್ತಿದ್ದು, ಗುಂಡಿ ತಪ್ಪಿಸಲು ಹೋಗಿ ಅನಾಹುತಗಳು ಸಂಭವಿಸುವ ಭೀತಿ ಎದುರಾಗಿದೆ. ಮಳೆಗಾಲದಲ್ಲಿ ಈ ಗುಂಡಿಗಳು ನೀರಿನಿಂದ ತುಂಬಿಕೊಳ್ಳುವುದರಿಂದ ಮಕ್ಕಳು ಬಿದ್ದ ಉದಾಹರಣೆಗಳೂ ಇವೆ ಎನ್ನಲಾಗಿದೆ. ಅಧಿಕಾರಿಗಳು ಇತ್ತ ಗಮನ ಹರಿಸಿ ಕೂಡಲೇ ರಸ್ತೆ ದುರಸ್ತಿ ಮಾಡಬೇಕು ಎಂದು ಸಾರ್ವಜನಿಕರು ಎಚ್ಚರಿಕೆ ನೀಡಿದ್ದಾರೆ.

The post ಬೆಳ್ತಂಗಡಿ: ರೆಂಕೆದ ಗುತ್ತು ಆಶ್ರಯ ಕಾಲೊನಿ ಮುಖ್ಯ ರಸ್ತೆಯಲ್ಲಿ ಅಪಾಯಕಾರಿ ಗುಂಡಿಗಳು ಸಾರ್ವಜನಿಕರ ಆಕ್ರೋಶ appeared first on Hosakananda.

[ad_2]

Source link

Leave a Reply

Your email address will not be published. Required fields are marked *