Advertisement

ಪಾಕ್‌ ಶಾಂತಿ ಮಾತುಕತೆ ವಿಫಲವಾದ ಬೆನ್ನಲ್ಲೇ ಮೋದಿಗೆ ಟ್ರಂಪ್‌ ಕರೆ – 40 ನಿಮಿಷ ಮಾತುಕತೆ

[ad_1]

Modi Trump White House

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರು ಮಂಗಳವಾರ ಸಂಜೆ ಸುಮಾರು 40 ನಿಮಿಷಗಳ ಕಾಲ ಸುದೀರ್ಘ ದೂರವಾಣಿ ಸಂಭಾಷಣೆ ನಡೆಸಿದ್ದಾರೆ.

ಫೆಬ್ರವರಿ 28ರಂದು ಇರಾನ್ (Iran) ಮೇಲೆ ಅಮೆರಿಕ (USA) ಮತ್ತು ಇಸ್ರೇಲ್(Isreal) ದಾಳಿ ನಡೆಸಿದ ನಂತರ ಮೋದಿ ಮತ್ತು ಟ್ರಂಪ್ ನಡುವೆ ನಡೆದ ಮೊದಲ ದೂರವಾಣಿ ಸಂಭಾಷಣೆ ಇದಾಗಿದೆ. ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ ಮತ್ತು ಇರಾನ್ ನಡುವಿನ ಮಾತುಕತೆ(Islamabad Talk) ವಿಫಲವಾದ ಬೆನ್ನಲ್ಲೇ ಇಬ್ಬರು ನಾಯಕರ ಮಾತುಕತೆ ಭಾರೀ ಮಹತ್ವ ಪಡೆದಿದೆ.

ಈ ಬಗ್ಗೆ ಮೋದಿ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿ, ನನ್ನ ಸ್ನೇಹಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಂದ ಕರೆ ಬಂದಿತು. ವಿವಿಧ ಕ್ಷೇತ್ರಗಳಲ್ಲಿ ನಮ್ಮ ದ್ವಿಪಕ್ಷೀಯ ಸಹಕಾರದಲ್ಲಿ ಸಾಧಿಸಿರುವ ಗಣನೀಯ ಪ್ರಗತಿಯನ್ನು ನಾವು ಪರಿಶೀಲಿಸಿದ್ದೇವೆ. ಎಲ್ಲಾ ಕ್ಷೇತ್ರಗಳಲ್ಲಿ ನಮ್ಮ ಸಮಗ್ರ ಜಾಗತಿಕ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು ನಾವು ಬದ್ಧರಾಗಿದ್ದೇವೆ. ಪಶ್ಚಿಮ ಏಷ್ಯಾದ ಪರಿಸ್ಥಿತಿಯ ಬಗ್ಗೆಯೂ ನಾವು ಚರ್ಚಿಸಿದ್ದೇವೆ ಮತ್ತು ಹಾರ್ಮುಜ್ ಜಲಸಂಧಿಯನ್ನು ಮುಕ್ತ ಮತ್ತು ಸುರಕ್ಷಿತವಾಗಿರಿಸುವ ಮಹತ್ವದ ಬಗ್ಗೆ ಮಾತನಾಡಿದ್ದೇವೆ ಎಂದು ತಿಳಿಸಿದ್ದಾರೆ.  ಇದನ್ನೂ ಓದಿ: ಅಮೆರಿಕ ದಿಗ್ಭಂಧನಕ್ಕೆ ಸೆಡ್ಡು – ಹಾರ್ಮುಜ್‌ ದಾಟಿದ ಇರಾನ್‌ ಬಂದರಿನಿಂದ ಬಂದ 2 ಹಡಗು

ಇರಾನ್ ಮತ್ತು ಅಮೆರಿಕ ನಡುವೆ ನಡೆಯುತ್ತಿರುವ ಯುದ್ಧ ಮತ್ತು ಮಧ್ಯಪ್ರಾಚ್ಯದ ಬದಲಾಗುತ್ತಿರುವ ವಿದ್ಯಮಾನಗಳ ಬಗ್ಗೆ ಇಬ್ಬರೂ ನಾಯಕರು ಗಂಭೀರ ಚರ್ಚೆ ನಡೆಸಿದರು. ಜಾಗತಿಕ ಇಂಧನ ಭದ್ರತೆಯ ದೃಷ್ಟಿಯಿಂದ ಪ್ರಮುಖವಾಗಿರುವ ಹಾರ್ಮುಜ್ ಜಲಸಂಧಿಯನ್ನು (Strait of Hormuz) ಮುಕ್ತವಾಗಿಡುವ ಪ್ರಾಮುಖ್ಯತೆಯ ಬಗ್ಗೆ ಚರ್ಚಿಸಲಾಗಿದೆ.

ಪಶ್ಚಿಮ ಏಷ್ಯಾದ ಸಂಘರ್ಷವು ಜಾಗತಿಕ ತೈಲ ಬೆಲೆಗಳು ಮತ್ತು ಆರ್ಥಿಕತೆಯ ಮೇಲೆ ಬೀರುವ ಪರಿಣಾಮಗಳ ಬಗ್ಗೆ ಮೋದಿ ಕಳವಳ ವ್ಯಕ್ತಪಡಿಸಿದ್ದಾರೆ.



[ad_2]

Source link publictv.in

Leave a Reply

Your email address will not be published. Required fields are marked *