Advertisement

ರಾಜ್ಯದಲ್ಲೇ ಕಲಬುರಗಿಯಲ್ಲಿ ಗರಿಷ್ಠ ತಾಪಮಾನ ದಾಖಲು – ಆರೆಂಜ್ ಅಲರ್ಟ್ ಘೋಷಣೆ



Weather

ಕಲಬುರಗಿ: ಬುಧವಾರ ರಾಜ್ಯದಲ್ಲಿಯೇ ಅತೀ ಹೆಚ್ಚು ಉಷ್ಣಾಂಶ (Temperature) ಕಲಬುರಗಿ (Kalaburagi) ಜಿಲ್ಲೆಯಲ್ಲಿ ದಾಖಲಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಜಿಲ್ಲೆಯ ನಾಲ್ಕು ತಾಲೂಕುಗಳಲ್ಲಿ ತಾಪಮಾನ ತೀವ್ರ ಏರಿಕೆಯಾಗಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ.

ಕಲಬುರಗಿ ತಾಲೂಕಿನ ಔರಾದ್‌ನಲ್ಲೇ ಗರಿಷ್ಠ 45 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದ್ದು, ಚಿಂಚೋಳಿ ಹಾಗೂ ಅಫಜಲಪುರ ತಾಲೂಕುಗಳಲ್ಲಿ ತಲಾ 44.03 ಡಿಗ್ರಿ ಸೆಲ್ಸಿಯಸ್, ಆಳಂದ ತಾಲೂಕಿನಲ್ಲಿ 44.01 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ವಿಶೇಷವಾಗಿ ಕಲಬುರಗಿ ತಾಲೂಕಿನ ಔರಾದ್ ಗ್ರಾಮದಲ್ಲಿ 45 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿರುವುದು ಗಮನಾರ್ಹವಾಗಿದೆ. ಇದನ್ನೂ ಓದಿ: ಡಿಎಂಕೆ ಹಾಗೂ ಮಿತ್ರಪಕ್ಷಗಳಿಗೆ ಮೂರನೇ ಎರಡರಷ್ಟು ಸ್ಥಾನಗಳ ಸುಲಭ ಬಹುಮತ: ಡಿಕೆಶಿ

ಉಷ್ಣಾಂಶದ ತೀವ್ರತೆ ಹೆಚ್ಚುತ್ತಿರುವ ಹಿನ್ನೆಲೆ ಹವಾಮಾನ ಇಲಾಖೆ (IMD) ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಇದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಮಧ್ಯಾಹ್ನ 12 ಗಂಟೆಯಿಂದ ಸಂಜೆವರೆಗೆ ಅನಾವಶ್ಯಕವಾಗಿ ಹೊರಗೆ ಬರದಂತೆ ಜಿಲ್ಲಾಡಳಿತ ಸಾರ್ವಜನಿಕರಿಗೆ ಸೂಚನೆ ನೀಡಿದೆ. ಇದನ್ನೂ ಓದಿ: Honor Killing | ಕುಡುಕ ಗಂಡನ ಬಿಟ್ಟು ಪ್ರೀತಿಸಿದವನ ಜೊತೆ ಹೋದ ಮಹಿಳೆಗೆ ವಿಷ ಕುಡಿಸಿ ಕೊಂದ ಪೋಷಕರು

ಬಿಸಿಲಿನ ಪರಿಣಾಮ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ, ಸಾಕಷ್ಟು ನೀರು ಸೇವನೆ, ನೆರಳಿನಲ್ಲಿ ಇರುವಿಕೆ ಸೇರಿದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಕಬ್ಬಿನಂತೆ ಮಂಡ್ಯ ಜನರ ಮಾತೂ ಸಿಹಿ: ಹಾಡಿಹೊಗಳಿದ ಮೋದಿ




Source link publictv.in

Leave a Reply

Your email address will not be published. Required fields are marked *