Advertisement

ಮರಕ್ಕೆ ಕಾರು ಡಿಕ್ಕಿ – ಸರ್ಕಲ್ ಇನ್ಸ್‌ಪೆಕ್ಟರ್ ಸ್ಥಳದಲ್ಲೇ ಸಾವು



Davanagere CPI Death In Car Accident

ದಾವಣಗೆರೆ: ಮರಕ್ಕೆ ಕಾರು (Car) ಡಿಕ್ಕಿ ಹೊಡೆದ ಪರಿಣಾಮ ಪೊಲೀಸ್ ಸರ್ಕಲ್ ಇನ್ಸ್‌ಪೆಕ್ಟರ್ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ದಾವಣಗೆರೆ (Davanagere) ಜಿಲ್ಲೆ ಜಗಳೂರು (Jagalur) ತಾಲೂಕಿನ ಮುಸ್ಟೂರು- ಕಡಬನಕಟ್ಟೆ ಗ್ರಾಮದ ಮಧ್ಯೆ ನಡೆದಿದೆ.

ರಘುನಾಥ್ (45) ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಸಿಪಿಐ. ರಘುನಾಥ್ ವಿಜಯನಗರ ಮತ್ತು ಕೊಪ್ಪಳ ಜಿಲ್ಲೆಗಳ ಡಿಸಿಆರ್‌ಇ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಚಿತ್ರದುರ್ಗದ ಕಡೆಯಿಂದ ಜಗಳೂರು ಕಡೆಗೆ ಬರುತ್ತಿರುವಾಗ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿರುವ ಮರಕ್ಕೆ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಸಿಪಿಐ ರಘುನಾಥ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಯೋಗೇಶ್‌ ಗೌಡ ಹತ್ಯೆ ಕೇಸ್‌ – ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ದೋಷಿ

ರಘುನಾಥ್ ದಾವಣಗೆರೆ, ಚಿತ್ರದುರ್ಗ ಸೇರಿದಂತೆ ಹಲವು ಕಡೆಗಳಲ್ಲಿ ಸೇವೆ ಸಲ್ಲಿಸಿದ್ದರು. ಜಗಳೂರು ಪೊಲೀಸ್ ಠಾಣಾ ವ್ಯಾಪ್ತಿ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಜಗಳೂರು ಸಿಪಿಐ ಸಿದ್ದರಾಮಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ʻಕೈʼ ನಾಯಕ ಪವನ್ ಖೇರಾಗೆ ಸುಪ್ರೀಂಕೋರ್ಟ್ ಶಾಕ್ – ತೆಲಂಗಾಣ ಹೈಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನಿಗೆ ತಡೆ




Source link publictv.in

Leave a Reply

Your email address will not be published. Required fields are marked *