Advertisement

ಪರಪ್ಪನ ಅಗ್ರಹಾರ ಪಾಲಾದ ವಿನಯ್‌ ಕುಲಕರ್ಣಿ- ಶಾಸಕ ಸ್ಥಾನಕ್ಕೆ ಕುತ್ತು?


Vinay Kulakarni : ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬಿಗ್ ಶಾಕ್ ನೀಡಿದ್ದು ಒಳಸಂಚು ಆರೋಪದ ಹಿನ್ನೆಲೆ ವಿನಯ್ ಕುಲಕರ್ಣಿ ಅಪರಾಧಿ ಎಂದು ತೀರ್ಪು ಪ್ರಕಟಿಸಿದೆ. ಹೀಗಾಗಿ ವಿನಯ್ ಕುಲಕರ್ಣಿ ಮತ್ತೆ ಪರಪ್ಪನ ಅಗ್ರಹಾರ ಪಾಲಾಗಿದ್ದಾರೆ. ಈ ಬೆನ್ನಲ್ಲೇ ಅವರ ಶಾಸಕ ಸ್ಥಾನಕ್ಕೆ ಕುತ್ತು ಬರುವ ಸಾಧ್ಯತೆಯಿದೆ.

ಕೋರ್ಟ್‌ ಶಿಕ್ಷೆಯ ಪ್ರಮಾಣವನ್ನು ಇಂದು ಪ್ರಕಟಿಸಲಿದೆ. ಒಂದು ವೇಳೆ ಕೋರ್ಟ್‌ ಈ ಅಪರಾಧಕ್ಕಾಗಿ ಕನಿಷ್ಠ 2 ವರ್ಷ ಅಥವಾ ಅದಕ್ಕಿಂತ ಹೆಚ್ಚು ವರ್ಷಗಳ ಜೈಲು ಶಿಕ್ಷೆ ವಿಧಿಸಿದರೆ ಜನಪ್ರತಿನಿಧಿಗಳ ಕಾಯ್ದೆಯ ಪ್ರಕಾರ ವಿನಯ್‌ ಕುಲಕರ್ಣಿ ತಕ್ಷಣವೇ ಧಾರವಾಡ ಗ್ರಾಮೀಣ ಕ್ಷೇತ್ರದ  ಶಾಸಕ ಸ್ಥಾನವನ್ನು ಕಳೆದುಕೊಳ್ಳಲಿದ್ದಾರೆ.

ಒಂದು ವೇಳೆ ಶಾಸಕರು ಹೈಕೋರ್ಟ್‌ಗೆ ಹೋಗಿ ತಮ್ಮ ಶಿಕ್ಷೆಗೆ ತಡೆ ತಂದರೆ ಮಾತ್ರ ಅವರ ಶಾಸಕ ಸ್ಥಾನ ಮರಳಿ ಸಿಗುವ ಸಾಧ್ಯತೆ ಇರುತ್ತದೆ. ಕೇವಲ ಜಾಮೀನು ಸಿಕ್ಕರೆ ಸಾಲದು, ಶಿಕ್ಷೆಗೆ ಕೋರ್ಟ್‌ ತಡೆ ನೀಡಬೇಕಾಗುತ್ತದೆ. ಅಲ್ಲದೆ ಜೈಲು ಶಿಕ್ಷೆಯ ಅವಧಿ ಪೂರ್ಣಗೊಂಡ ನಂತರದ 6 ವರ್ಷಗಳ ಕಾಲ ಅವರು ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ.





Source link

Leave a Reply

Your email address will not be published. Required fields are marked *