[ad_1]
ರಾಯಚೂರು: ಬುಲೆರೋ ವಾಹನಕ್ಕೆ ಸಿಮೆಂಟ್ ಟ್ಯಾಂಕರ್ ಡಿಕ್ಕಿಯಾಗಿ 8 ಜನ ಭೀಕರವಾಗಿ ಸಾವನ್ನಪ್ಪಿರುವ ಘಟನೆ ಆಂಧ್ರದ (Andhra Pradesh) ಕರ್ನೂಲ್ (Kurnool) ಜಿಲ್ಲೆಯ ಮಂತ್ರಾಲಯ (Mantralaya) ಬಳಿಯ ಚಿಲಕನಡೋಣ ಬಳಿ ನಡೆದಿದೆ.
ಹಾಸನ, ಚಿಕ್ಕಮಗಳೂರು ಮೂಲದ ಅಮೃತ, ತೇಜಶ್ವಿನಿ, ಧನ್ಯ, ದೀಪಿಕ, ದಿಕ್ಷಿತ, ಪ್ರತಾಪ್, ಕುಮಾರ್, ಯಶೋದಮ್ಮ ಮೃತರು. ಮೂರು ವರ್ಷದ ಮಗು ಸೇರಿ ಐವರು ಮಹಿಳೆಯರು ಹಾಗೂ ಇಬ್ಬರು ಪುರುಷರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಒಮನ್ ಭಾಗದ ಹಾರ್ಮುಜ್ ಜಲಸಂಧಿ ಮೂಲಕ ಹಡಗುಗಳ ಮುಕ್ತ ಪ್ರಯಾಣಕ್ಕೆ ಅನುಮತಿ ನೀಡುತ್ತಾ ಇರಾನ್?
ಇಂದು (ಏ.16) ಜಾವ 4 ಗಂಟೆ ಸುಮಾರಿಗೆ ರಾಯರ ದರ್ಶನಕ್ಕಾಗಿ ಮಂತ್ರಾಲಯಕ್ಕೆ ತೆರಳುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ಈ ವೇಳೆ ಮಂತ್ರಾಲಯಕ್ಕೆ ಹೋಗುತ್ತಿದ್ದ ಬುಲೆರೋ ವಾಹನಕ್ಕೆ ಬೀದರ್‌ನಿಂದ ತುಮಕೂರಿಗೆ ಹೋಗುತ್ತಿದ್ದ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲೇ 8 ಜನ ಸಾವನ್ನಪ್ಪಿದ್ದಾರೆ.
ಇನ್ನುಳಿದ ಗಾಯಾಳುಗಳನ್ನು ಕರ್ನೂಲು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂತ್ರಾಲಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಯೋಗೇಶ್‌ಗೌಡ ಕೊಲೆ ಕೇಸಲ್ಲಿ ವಿನಯ್ ಕುಲಕರ್ಣಿ ದೋಷಿ – ಇಂದು ಶಿಕ್ಷೆ ಪ್ರಮಾಣ ಪ್ರಕಟ, ಎಲ್ಲರ ಚಿತ್ತ ಕೋರ್ಟ್‌ನತ್ತ
[ad_2]
Source link publictv.in

















Leave a Reply