
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈ ಹೊತ್ತಿನಲ್ಲೇ ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ (Emmanuel Macron), ಪ್ರಧಾನಿ ನರೇಂದ್ರ ಮೋದಿ (PM Modi) ಅವರಿಗೆ ದೂರವಾಣಿ ಕರೆ ಮಾಡಿದ್ದು, ಸುದೀರ್ಘ ಮಾತುಕತೆ ನಡೆಸಿದ್ದಾರೆ. ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಬಿಕ್ಕಟ್ಟು ಹಾಗೂ ಹಾರ್ಮುಜ್ ಜಲಸಂಧಿಯ ಭದ್ರತೆ ಬಗ್ಗೆ ಚರ್ಚಿಸಿದ್ದಾರೆ.
Received a phone call from my dear friend President Emmanuel Macron. We discussed the situation in West Asia and agreed on the need to urgently restore safety and freedom of navigation in the Strait of Hormuz.
We will continue our close cooperation to advance peace and stability…
— Narendra Modi (@narendramodi) April 16, 2026
ಈ ಮಾಹಿತಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ ಪಶ್ಚಿಮ ಏಷ್ಯಾದಲ್ಲಿ (West Asia) ಸ್ಥಿರತೆ ಖಚಿತಪಡಿಸಿಕೊಳ್ಳುವ ಮತ್ತು ಸುರಕ್ಷಿತ ಸಮುದ್ರ ಮಾರ್ಗಗಳನ್ನು ನಿರ್ವಹಿಸುವ ಪ್ರಾಮುಖ್ಯತೆಯ ಬಗ್ಗೆ ಇಬ್ಬರೂ ನಾಯಕರು ಒಪ್ಪಿಕೊಂಡಿದ್ದಾರೆ. ಹಾರ್ಮುಜ್ ಜಲಸಂಧಿಯಲ್ಲಿ ಸುರಕ್ಷತೆ ಮತ್ತು ಸಂಚಾರ ಮುಕ್ತಗೊಳಿಸಲು ಪುನಃಸ್ಥಾಪಿಸುವ ತುರ್ತು ಅಗತ್ಯಗಳನ್ನ ಒತ್ತಿ ಹೇಳಿದ್ದಾರೆ. ಇದನ್ನೂ ಓದಿ: ಒಮನ್ ಭಾಗದ ಹಾರ್ಮುಜ್ ಜಲಸಂಧಿ ಮೂಲಕ ಹಡಗುಗಳ ಮುಕ್ತ ಪ್ರಯಾಣಕ್ಕೆ ಅನುಮತಿ ನೀಡುತ್ತಾ ಇರಾನ್?

ಎಕ್ಸ್‌ನಲ್ಲಿ ಮೋದಿ ಹೇಳಿದ್ದೇನು?
ನನ್ನ ಆತ್ಮೀಯ ಗೆಳೆಯ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರಿಂದ ಫೋನ್ ಕರೆ ಬಂತು. ಪಶ್ಚಿಮ ಏಷ್ಯಾದ ಪರಿಸ್ಥಿತಿಯ ಬಗ್ಗೆ ನಾವು ಚರ್ಚಿಸಿದ್ದೇವೆ. ಜೊತೆಗೆ ಹಾರ್ಮುಜ್ ಜಲಸಂಧಿಯಲ್ಲಿ ಸುರಕ್ಷತೆ ಮತ್ತು ಮುಕ್ತ ಸಂಚಾರಕ್ಕೆ ಅಗತ್ಯವಿರುವ ಅಗತ್ಯತೆಗಳನ್ನು ತುರ್ತಾಗಿ ಪುನಃಸ್ಥಾಪಿಸುವ ಅಗತ್ಯವನ್ನು ಒಪ್ಪಿಕೊಂಡಿದ್ದೇವೆ. ಈ ಪ್ರದೇಶ ಮತ್ತು ಅದರಾಚೆಗೆ ಶಾಂತಿ ಮತ್ತು ಸ್ಥಿರತೆಯನ್ನು ಕಾಯ್ದುಕೊಳ್ಳಲು ನಾವು ನಿರಂತರ ಸಹಕಾರ ಮುಂದುವರಿಸುತ್ತೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರಷ್ಯಾ, ಇರಾನ್ ತೈಲ ಖರೀದಿಗೆ ಭಾರತಕ್ಕೆ ಅವಕಾಶ ನೀಡುವ ವಿನಾಯಿತಿಯಲ್ಲಿ ಬದಲಾವಣೆ ಮಾಡಲ್ಲ: ಅಮೆರಿಕ
ಟ್ರಂಪ್ ಜೊತೆಗೆ 40 ನಿಮಿಷ ಮಾತುಕತೆ
ಇದಕ್ಕೂ ಮುನ್ನ ಏಪ್ರಿಲ್ 14 ರಂದು ಪ್ರಧಾನಿ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಮಾತುಕತೆ ನಡೆಸಿದ್ದರು. ದೂರವಾಣಿ ಮೂಲಕ ಸುಮಾರು 40 ನಿಮಿಷಕ್ಕೂ ಹೆಚ್ಚು ಕಾಲ ಮಾತುಕತೆ ನಡೆಸಿದ್ದರು. ಹಾರ್ಮುಜ್ ಜಲಸಂಧಿ ದಿಗ್ಬಂಧನದ ಬಗ್ಗೆಯೂ ಚರ್ಚಿಸಿದ್ದರು ಎಂದು ಅಮೆರಿಕದ ರಾಯಭಾರಿ ಗೋರ್ ತಿಳಿಸಿದ್ದರು. ಇದನ್ನೂ ಓದಿ: ಬೆಂಗಳೂರು IISc ದಾಳಿಯ ಸಂಚುಕೋರನಿಗೆ ಲಾಹೋರ್‌ನಲ್ಲಿ ಗುಂಡೇಟು – ಗಂಭೀರ ಗಾಯ, ಐಸಿಯುನಲ್ಲಿ ಚಿಕಿತ್ಸೆ
Source link publictv.in

















Leave a Reply