Advertisement

ಮೂರು ದಿನಗಳ ಆಪರೇಷನ್‌ ಯಶಸ್ವಿ – ನರಹಂತಕ ಕಾಡಾನೆ ಸೆರೆ

[ad_1]

Beluru Elephant

ಹಾಸನ: ಬೇಲೂರು (Beluru) ತಾಲೂಕಿನ ಕಾನಳ್ಳಿ ಅರಣ್ಯ ಪ್ರದೇಶದಲ್ಲಿದ್ದ ದೈತ್ಯಾಕಾರದ ನರಹಂತಕ ಕಾಡಾನೆಯನ್ನು (Elephant) ಅರಣ್ಯ ಇಲಾಖೆ (Forest Department) ಸಿಬ್ಬಂದಿ ಸೆರೆಹಿಡಿದಿದ್ದಾರೆ.

ಇಂದು (ಏ.18) ಮೂರನೇ ದಿನದ ಕಾರ್ಯಾಚರಣೆ ಆರಂಭಿಸಿದ್ದ ಇಟಿಎಫ್ ಸಿಬ್ಬಂದಿ ಮುಂಜಾನೆಯೇ ಕಾಡಾನೆ ಇರುವ ಸ್ಥಳವನ್ನು ಪತ್ತೆ ಮಾಡಿದ್ದರು. ದೈತ್ಯಾಕಾರದ ಕಾಡಾನೆ ಜೊತೆ ಕ್ಯಾಪ್ಟನ್ ಕಾಡಾನೆ ಸಹ ಇತ್ತು. ಈ ವೇಳೆ ಕುಮ್ಕಿ ಆನೆಗಳೊಂದಿಗೆ ತೆರಳಿ ನರಹಂತಕ ಕಾಡಾನೆಗೆ ಅರವಳಿಕೆ ಚುಚ್ಚುಮದ್ದು ನೀಡಲಾಯಿತು. ಇದನ್ನೂ ಓದಿ: ಆರು ಕುಮ್ಕಿ ಆನೆಗಳಿಗೆ ಚಳ್ಳೆಹಣ್ಣು ತಿನ್ನಿಸಿದ ಪುಂಡಾನೆ – ಸೆರೆ ಬಳಿಕ ಹಗ್ಗ ಕಿತ್ತೆಸೆದು ಕಾಡಿಗೆ ಜೂಟ್‌!

ಚುಚ್ಚುಮದ್ದು ನೀಡುತ್ತಿದ್ದಂತೆ ನರಹಂತಕ ಒಂಟಿಕೋರೆ ಕಾಡಾನೆ ಹಾಗೂ ಕ್ಯಾಪ್ಟನ್ ಕಾಡಾನೆ ಜೊತೆಯಲ್ಲಿಯೇ ಓಡಲಾರಂಭಿಸಿದ್ದವು. ಬೆನ್ನಟ್ಟಿದ ಕಾರ್ಯಾಚರಣೆ ತಂಡ ಎರಡು ಕಾಡಾನೆಗಳನ್ನು ಬೇರ್ಪಡಿಸಿತು. ಸ್ವಲ್ಪ ದೂರು ಓಡಿ ಪ್ರಜ್ಞೆತಪ್ಪಿ ಬಿದ್ದ ಕಾಡಾನೆಯನ್ನು, ಕುಮ್ಕಿ ಆನೆಗಳು ಸುತ್ತುವರಿದವು. ಬಳಿಕ ಕಾಡಾನೆಗೆ ನೀರು ಹಾಕಿ ಆರೈಕೆ ಮಾಡಿ ಹಗ್ಗದಲ್ಲಿ ಕಟ್ಟಲಾಯಿತು.

ಕಾಡಾನೆಯನ್ನು ಸ್ಥಳಾಂತರ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ನರಹಂತಕ ಕಾಡಾನೆ ಸೆರೆಯಿಂದ ಬೇಲೂರು ಭಾಗದ ಜನರು ನಿಟ್ಟುಸಿರು ಬಿಟ್ಟಿದ್ದಾರೆ. ಇದನ್ನೂ ಓದಿ: ರಾತ್ರಿವೇಳೆ ಮನೆ ಬಾಗಿಲಿಗೆ ಬಂದ ಕಾಡಾನೆಗಳು – ಬೆಚ್ಚಿಬಿದ್ದ ಮನೆ ಮಾಲೀಕ

[ad_2]

Source link publictv.in

Leave a Reply

Your email address will not be published. Required fields are marked *