Advertisement

ದಾವಣಗೆರೆ; ಪೋಸ್ಟ್‌ಮ್ಯಾನ್ ವರದಕ್ಷಿಣೆ ಕಿರುಕುಳ; ಮಹಿಳೆ ಆತ್ಮಹತ್ಯೆ » Dvgsuddi Kannada | online news portal

[ad_1]

ದಾವಣಗೆರೆ: ಅಂಚೆ‌ ಇಲಾಖೆ ಪೋಸ್ಟ್ ಮ್ಯಾನ್  ವರದಕ್ಷಿಣೆ ಕಿರುಕುಳದಿಂದ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ದೇವರಾಜ ಅರಸು ಬಡಾವಣೆಯ ನಿವಾಸಿ ಕಾವ್ಯಾ (27) ಆತ್ಮಹತ್ಯೆ ಮಾಡಿಕೊಂಡವರು. ಮೂಲತಃ ದಾವಣಗೆರೆ ತಾಲ್ಲೂಕಿನ ಮಂಡ್ಲೂರು ಗ್ರಾಮದ ಕಾವ್ಯಾ ಹಾಗೂ ಚನ್ನಗಿರಿ ತಾಲ್ಲೂ‌ಕಿನ ಹೊದಿಗೆರೆಯ ನಿವಾಸಿ ಅಂಚೆ ಇಲಾಖೆ ಪೋಸ್ಟ್‌ಮ್ಯಾನ್ ಮನು 2 ವರ್ಷಗಳ ಹಿಂದೆ ಮದುವೆಯಾಗಿದ್ದನು.

ದಾವಣಗೆರೆಯ ದೇವರಾಜ ಅರಸು ಬಡಾವಣೆಯ ಕ್ವಾಟ್ರಸ್‌ನಲ್ಲಿ ವಾಸವಾಗಿದ್ದರು. ಪ್ರಕರಣ ಸಂಬಂಧ ಪೊಲೀಸರು ಮನು ಅವರನ್ನು ಬಂಧಿಸಿದ್ದಾರೆ. ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ಮನುಗೆ ಮತ್ತೊಬ್ಬ ಮಹಿಳೆಯೊಂದಿಗೆ ಅನೈತಿಕ ಸಂಬಂಧವಿದ್ದ ಶಂಕೆ ವ್ಯಕ್ತವಾಗಿದ್ದು, ಇದಲ್ಲದೆ ಕಾವ್ಯಾ ಮೇಲೆ ವರದಕ್ಷಿಣೆ ಕಿರುಕುಳದ ಆರೋಪಗಳು ಕೇಳಿಬಂದಿವೆ. ಈ ಸಂಬಂಧ ಸಾಕ್ಷ್ಯಗಳನ್ನು ಕಾವ್ಯಾ ಪೆನ್‌ಡ್ರೈವ್‌ನಲ್ಲಿ ಸಂಗ್ರಹಿಸಿಟ್ಟಿದ್ದಾಳೆ ಎನ್ನಲಾಗಿದೆ. ಸದ್ಯ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ಮುಂದುವರೆಸಿದ್ದಾರೆ.

 

[ad_2]

Source link

Leave a Reply

Your email address will not be published. Required fields are marked *