Advertisement

ಬಿರುಗಾಳಿಯೊಂದಿಗೆ ಈ 11 ಜಿಲ್ಲೆಯಲ್ಲಿ ಮಳೆ ಮುನ್ಸೂಚನೆ » Dvgsuddi Kannada | online news portal

[ad_1]

ಬೆಂಗಳೂರು: ಬಿರು ಬಿಸಿಲಿನಿಂದ ಕಂಗೆಟ್ಟಿದ್ದ ಜನರಿಗೆ ತುಸು ನೆಮ್ಮದಿ ಸುದ್ದಿಯಾಗಿದೆ.‌ ರಾಜ್ಯದ 11‌ ಜಿಲ್ಲೆಗಳ ಬಿರು ಗಾಳಿ ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.

ಇಂದು (ಏ.21)ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ. ಕರ್ನಾಟಕದ ದಕ್ಷಿಣ‌ ಕನ್ನಡ ಹಾಗೂ ಉಡುಪಿ ಜಿಲ್ಲೆ, ಉತ್ತರ ಒಳನಾಡಿನ ವಿಜಯಪುರ, ಕಲಬುರಗಿ, ಯಾದಗಿರಿ, ಬೆಳಗಾವಿ ಹಾಗೂ ಧಾರವಾಡ ಜಿಲ್ಲೆ, ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಗಾಳಿಯೊಂದಿಗೆ ಮಳೆಯ ಮುನ್ಸೂಚನೆ ಇದೆ.

ಕಲಬುರಗಿ, ಬೀದರ್ ಜಿಲ್ಲೆಯಲ್ಲಿ ಅಧಿಕ ಉಷ್ಣಾಂಶ ದಾಖಲಾಗಿದೆ. ಕಲಬುರಗಿಯಲ್ಲಿ 41.7 ಡಿಗ್ರಿ ಸೆಲ್ಸಿಯಸ್‌, ಬೀದರ್‌ನಲ್ಲಿ 41.6 ಡಿಗ್ರಿ ಸೆಲ್ಸಿಯಸ್, ರಾಯಚೂರಿನಲ್ಲಿ 41.4 ಡಿಗ್ರಿ, ಕೊಪ್ಪಳದಲ್ಲಿ 40.4 ಡಿಗ್ರಿ, ವಿಜಯಪುರದಲ್ಲಿ 39.9ಬಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.‌ ಇನ್ನೂ ಬೆಂಗಳೂರು ನಗರದಲ್ಲಿ 36 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

[ad_2]

Source link

Leave a Reply

Your email address will not be published. Required fields are marked *