[ad_1]
1
SSLC: ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಹಿಂದಿ ಭಾಷೆಗೆ ಗ್ರೇಡ್ ಬದಲು ಅಂಕವನ್ನು ನೀಡಬೇಕೆಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮಹತ್ವದ ಆದೇಶವನ್ನು ನೀಡಿದೆ.


2026ನೇ ಸಾಲಿನ SSLC ಪರೀಕ್ಷೆಯಲ್ಲಿ ಹಿಂದಿ (Hindi) ಸೇರಿದಂತೆ ತೃತೀಯ ಭಾಷೆ ವಿಷಯಗಳಿಗೆ ಅಂಕದ ಬದಲಿಗೆ ಗ್ರೇಡ್ ನೀಡಲಾಗುವುದು ಎಂದು ಕ್ಷಣ ಇಲಾಖೆ ತಿಳಿಸಿತ್ತು. ಈ ಪ್ರಕರಣ ಹೈಕೋರ್ಟ್ ಮೆಟ್ಟಿಲೇರಿತ್ತು. ಇದೀಗ ಈ ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಹಿಂದಿ ಭಾಷೆಗೆ ಗ್ರೇಡ್ ಬದಲು ಅಂಕಗಳನ್ನು ನೀಡಬೇಕೆಂದು ರಾಜ್ಯ ಸರ್ಕಾರಕ್ಕೆ ಮಹತ್ವದ ಆದೇಶ ನೀಡಿದೆ.
ನ್ಯಾಯಮೂರ್ತಿ ಇ.ಎಸ್ ಇಂದಿರೇಶ್ ಅವರಿದ್ದ ಹೈಕೋರ್ಟ್ ಪೀಠ ಈ ಒಂದು ಆದೇಶ ಹೊರಡಿಸಿದೆ. ಪ್ರಸಕ್ತ ಸಾಲಿಗೆ ಹಿಂದಿ ಭಾಷೆಗೆ ಗ್ರೇಡ್ ಬದಲು ಅಂಕ ನೀಡಿ ಎಂದು ಆದೇಶ ಹೊರಡಿಸಿದ್ದು, ಸರ್ಕಾರದ ಪರವಾಗಿ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ವಾದ ಮಂಡಿಸಿದರು. ಹೈಕೋರ್ಟ್ ವಿಭಾಗಿಯ ಪೀಠದಲ್ಲಿ ಪಿಐಎಲ್ ಮಜಾ ಗೊಂಡಿದೆ ಹಿಂದಿ ಭಾಷೆಯಲ್ಲಿ ಲಕ್ಷಕ್ಕೂ ಹೆಚ್ಚು ಮಂದಿ ಅನುತ್ತಿರ್ನಗೊಂಡಿದ್ದರು. ಹೀಗಾಗಿ ವಿದ್ಯಾರ್ಥಿಗಳ ಮೇಲೆ ಒತ್ತಡ ಕಡಿಮೆ ಮಾಡಲು ಈ ಕ್ರಮ ಕೈಗೊಳ್ಳಲಾಗಿದೆ. ಸೂಕ್ತ ತಿದ್ದುಪಡಿ ಯೊಂದಿಗೆ ನಿಮ್ಮ ರಚಿಸಲು ಸರ್ಕಾರ ಕರಡು ರೂಪಿಸುತ್ತಿದೆ ಅಂಕದ ಬದಲು ಗ್ರೇಡ್ ನೀಡಲಾಗುತ್ತಿದೆ ಎಂದು ಎಜಿ ಶಶಿಕರಣ್ ಶೆಟ್ಟಿ ವಾದ ಮಂಡಿಸಿದರು.
ಬಳಿಕ ನ್ಯಾಯಮೂರ್ತಿ ಎಸ್ ಇಂದಿರೇಶ ಅವರಿದ್ದ ಹೈಕೋರ್ಟ್ ಪೀಠ ಸರ್ಕಾರಕ್ಕೆ ಪ್ರಶ್ನಿಸಿದ್ದು, ಎಸ್ ಎಸ್ ಎಲ್ ಸಿ ಪರೀಕ್ಷೆ ಆದಿ ಸೂಚನೆ ಹೊರಡಿಸಿದಾಗಲೇ ಇದನ್ನು ಸ್ಪಷ್ಟಪಡಿಸಬೇಕಿತ್ತು. ಅಧಿಸೂಚನೆಯಲ್ಲಿ ಇಲ್ಲದ ಗ್ರೇಡ್ ಪದ್ದತಿ ಈಗ ಅನುಷ್ಠಾನಗೊಳಿಸುತ್ತಿದ್ದೀರಿ ಪಿಯುಸಿಯಲ್ಲಿ ಈಗ 83 ಪ್ರತಿಶತ ವಿದ್ಯಾರ್ಥಿಗಳು ಉತ್ತೀರ್ಣರಾಗುತ್ತಿದ್ದಾರೆ ನೀವು ಅದನ್ನು ಪಾಸ್ ಮಾಡಬೇಕೆಂದಿದ್ದರೆ ಪರೀಕ್ಷೆಯನ್ನೇ ರದ್ದು ಮಾಡಿ. ನಿಯಮ ರೂಪಿಸಿದ ಬಳಿಕ ಸರ್ಕಾರ ಸೂಕ್ತವನಿಸಿದ ಕ್ರಮ ತೆಗೆದುಕೊಳ್ಳಬಹುದು. ನಿಯಮ ರೂಪಿಸುವ ಮುಂಚಿನ ಪರಿಚಯ ಅಂಕ ಪದ್ಧತಿ ಬದಲಾವಣೆ ಸೂಕ್ತವಲ್ಲ 2025 26ನೇ ಸಾಲಿನ ಹಿಂದಿ ಭಾಷೆಗೆ ಅಂಕ ನೀಡಲು ಹೈಕೋರ್ಟ್ ಆದೇಶ ಹೊರಡಿಸಿದೆ.
[ad_2]
Source link


















Leave a Reply