Advertisement

ಹಿರಿಯ ಕಂದಾಯ ಅಧಿಕಾರಿ ಮಗಳ ಮೇಲೆ ಅತ್ಯಾಚಾರ ಎಸಗಿ ಹತ್ಯೆ – ಮನೆಗೆಲಸದವನ ಮೇಲೆ ಶಂಕೆ

[ad_1]

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ (Delhi) ಹಿರಿಯ ಕಂದಾಯ ಅಧಿಕಾರಿಯೊಬ್ಬರ (Indian Revenue Service) 22 ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗಿ ಹತ್ಯೆ ಮಾಡಲಾಗಿದೆ.

ಆಗ್ನೇಯ ದೆಹಲಿಯ ಪ್ರದೇಶದಲ್ಲಿರುವ ಅವರ ಮನೆಯಲ್ಲಿ ಈ ಕೊಲೆ ನಡೆದಿದೆ. ಕೊಲೆಗೂ ಮುನ್ನ ಆಕೆಯ ಮೇಲೆ ಅತ್ಯಾಚಾರ ಎಸಗಲಾಗಿದೆ. ಹತ್ಯೆಗೆ ಮೊಬೈಲ್‌ ಫೋನ್‌ ಚಾರ್ಜರ್‌ ಕೇಬಲ್‌ ಬಳಕೆ ಮಾಡಲಾಗಿದೆ ಎಂದು ಪ್ರಾಥಮಿಕ ತನಿಖೆ ವೇಳೆ ತಿಳಿದು ಬಂದಿದೆ. ಕೊಲೆಯಾದ ಯುವತಿ ಎಂಜಿನಿಯರಿಂಗ್ ವಿದ್ಯಾಭ್ಯಾಸ ಮುಗಿಸಿ ಯುಪಿಎಸ್‌ಸಿ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದಳು ಎಂದು ತಿಳಿದುಬಂದಿದೆ. ಇದನ್ನೂ ಓದಿ: ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಪೊಲೀಸ್ ಅಧಿಕಾರಿಗೆ 20 ವರ್ಷ ಜೈಲು ಶಿಕ್ಷೆ

ಮುಂಜಾನೆ ಮನೆಯಲ್ಲಿ ಯುವತಿ ಒಬ್ಬಳೇ ಇದ್ದಳು. ಆಕೆಯ ಪೋಷಕರು ಜಿಮ್‌ಗೆ ಹೋಗಿದ್ದರು ಎಂದು ಪೊಲೀಸ್ (Police) ಮೂಲಗಳು ತಿಳಿಸಿವೆ. ಒಂದೂವರೆ ತಿಂಗಳ ಹಿಂದೆ ಕೆಲಸದಿಂದ ತೆಗೆಯಲಾಗಿದ್ದ ಮನೆಗೆಲಸದ ವ್ಯಕ್ತಿಯ ಮೇಲೆ ಶಂಕೆ ವ್ಯಕ್ತವಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯ ಪತ್ತೆಗೆ ಬಲೆ ಬೀಸಿದ್ದಾರೆ. ಇದನ್ನೂ ಓದಿ: ವಿಡಿಯೋ ಲೀಕ್‌ ಮಾಡೋದಾಗಿ ಬೆದರಿಸಿ ಬಾಲಕಿ ಮೇಲೆ 7 ಕಾಮುಕರಿಂದ ಸಾಮೂಹಿಕ ಅತ್ಯಾಚಾರ

[ad_2]

Source link publictv.in

Leave a Reply

Your email address will not be published. Required fields are marked *