Advertisement

Bengaluru : ಪ್ರಿಯಕರನ ಕೈ-ಕಾಲು ಕಟ್ಟಿ ಬೆಂಕಿ ಹಚ್ಚಿ ಕೊಂದ ಪ್ರಕರಣ

[ad_1]

Bengaluru : ಪ್ರಿಯತಮೆ ಒಬ್ಬಳು ಫಾರಿನ್ ಸ್ಟೈಲ್ ನಲ್ಲಿ ಪ್ರಪೋಸ್ ಮಾಡ್ತೀನಿ ಅಂತ ಹೇಳಿ ಪ್ರಿಯಕರನ ಕೈಕಾಲು ಕಟ್ಟಿ ಆತನಿಗೆ ಬೆಂಕಿ ಇಟ್ಟು ಹತ್ಯೆ ಮಾಡಿರುವ ಭೀಕರ ಘಟನೆ ಬೆಂಗಳೂರಿನಲ್ಲಿ ನಡೆದಿತ್ತು. ಇದೀಗ ಈ ಪ್ರಕರಣದ ಕುರಿತಾಗಿ ಯುವತಿ ತ್ತಪ್ಪೊಪ್ಪಿಕೊಂಡಿದ್ದು ಹಲವು ಸ್ಪೋಟಕ ರಹಸ್ಯಗಳನ್ನು  ಬಿಚ್ಚಿಟ್ಟಿದ್ದಾಳೆ.

ಯುವತಿಯ ಪ್ರಿಯತಮ ಕಿರಣ್ ಎಂಬ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದು, ಆರೋಪಿ ಯುವತಿ ಪ್ರೇರಣಾಳನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಪ್ರೀತಿ ಹೆಸರಲ್ಲಿ ನಡೆದ ಈ ಘಟನೆ ತೀವ್ರ ಆಘಾತ ಮೂಡಿಸಿದ್ದು, ಹತ್ಯೆಯ ಹಿಂದಿನ ನಿಖರ ಕಾರಣಕ್ಕಾಗಿ ತನಿಖೆ ಮುಂದುವರಿದಿದೆ. ಸದ್ಯ ಪ್ರೇರಣಾ ಪೊಲೀಸರ ವಶದಲ್ಲಿದ್ದು ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾಳೆ. ಕಿರಣ್ ಕೈಕಾಲುಗಳನ್ನು ಮಂಚಕ್ಕೆ ಕಟ್ಟಿ ಹಾಕಿ ಮೈಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದೆ ಎಂದು ಆಕೆ ನೀಡಿರುವ ಹೇಳಿಕೆ ಕೇಳಿ ಖುದ್ದು ಪೊಲೀಸರೇ ಬೆಚ್ಚಿಬಿದ್ದಿದ್ದಾರೆ.

ಪೊಲೀಸರ ತನಿಖೆಯ ವೇಳೆ ದೊರೆತ ಮಾಹಿತಿ ಪ್ರಕಾರ, ಕಳೆದ ವರ್ಷ ಆಗಸ್ಟ್‌ನಲ್ಲಿ ಪ್ರೇಮಾಗೆ ಕಿರಣ್ ಪರಿಚಯವಾಗಿದ್ದ. ಈ ವರ್ಷದ ಫೆಬ್ರವರಿ 14ರ ‘ವ್ಯಾಲೆಂಟೈನ್ಸ್ ಡೇ’ ದಿನ ಪ್ರೇಮಾ ತನ್ನ ಪ್ರೀತಿಯನ್ನು ನಿವೇದಿಸಿದ್ದಳು. ಕಿರಣ್ ಕೂಡ ಒಪ್ಪಿಕೊಂಡಿದ್ದ. ಪ್ರಿಯಕರನಿಗಾಗಿ ಪ್ರೇಮಾ ಬರೋಬ್ಬರಿ 4.5 ಲಕ್ಷ ರೂಪಾಯಿ ಮೌಲ್ಯದ ಬೈಕ್ ಮತ್ತು ಮೊಬೈಲ್ ಫೋನ್ ಕೊಡಿಸಲು ಮುಂದಾಗಿದ್ದಳು. ಕೊಲೆ ಕೃತ್ಯ ನಡೆದ ದಿನವೂ ಇಬ್ಬರೂ ಸೇರಿ ಬೈಕ್ ನೋಡಲು ಹೋಗಿದ್ದರು. ಆದರೆ, ಇತ್ತೀಚೆಗೆ ಕಿರಣ್ ಪ್ರೇಮಾಳಿಂದ ಅಂತರ ಕಾಯ್ದುಕೊಳ್ಳಲು ಶುರು ಮಾಡಿದ್ದ. ಇದರಿಂದ ಮನನೊಂದಿದ್ದ ಪ್ರೇಮಾ, ಆತನನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಳ್ಳಲು ಮೊದಲೇ ತೀರ್ಮಾನಿಸಿದ್ದಳು. ಅದಕ್ಕಾಗಿಯೇ ಪೆಟ್ರೋಲ್ ಮತ್ತು ಸೀಮೆ ಎಣ್ಣೆಯನ್ನು ಮೊದಲೇ ಖರೀದಿಸಿ ತಂದಿಟ್ಟುಕೊಂಡಿದ್ದಳು. ಮದುವೆ ವಿಚಾರವಾಗಿ ಮನೆಯಲ್ಲಿ ಮತ್ತೆ ಗಲಾಟೆ ಆರಂಭವಾದಾಗ, ಪ್ಲಾನ್ ಪ್ರಕಾರ ಕಿರಣ್‌ನನ್ನು ಮಂಚಕ್ಕೆ ಕಟ್ಟಿ ಹಾಕಿ ಬೆಂಕಿ ಹಚ್ಚಿದ್ದಾಳೆ ಎಂದು ತಿಳಿದುಬಂದಿದೆ.

ಏನಿದು ಘಟನೆ?

banner

ಮೃತ ಕಿರಣ್ ಮತ್ತು ಆರೋಪಿ ಯುವತಿ ಪ್ರೇರಣಾ ಒಂದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಕಳೆದ ಕೆಲವು ದಿನಗಳಿಂದ ಪ್ರೀತಿಸುತ್ತಿದ್ದರು. ಮಂಗಳವಾರ ಪ್ರೇರಣಾ ತನ್ನ ಪ್ರಿಯಕರ ಕಿರಣ್ ನನ್ನು ಮನೆಗೆ ಕರೆದಿದ್ದಳು. ಅಂದು ಆಕೆಯ ತಾಯಿ ಮತ್ತು ಅಣ್ಣ ಮನೆಯಲ್ಲಿ ಇಲ್ಲದಿದ್ದನ್ನು ನೋಡಿ ಕಿರಣ್ ಮನೆಗೆ ಬಂದಿದ್ದನು.

ಇದೇ ಸಂದರ್ಭದಲ್ಲಿ ಯುವತಿ ಪ್ರೇರಣಾ ‘ನಿನಗೆ ವಿದೇಶಿ ಶೈಲಿಯಲ್ಲಿ ಪ್ರಪೋಸ್ ಮಾಡ್ತೀನಿ’ ಎಂದು ಹೇಳಿ ಕಿರಣ್‌ನ ಕಣ್ಣಿಗೆ ಬಟ್ಟೆ ಕಟ್ಟಿ, ಕೈ-ಕಾಲುಗಳನ್ನು ಹಗ್ಗದಿಂದ ಬಿಗಿದಿದ್ದಾಳೆ. ಕಿರಣ್ ‘ಯಾಕೆ ಇಷ್ಟು ಟೈಟ್ ಆಗಿ ಕಟ್ತಿದ್ದೀಯಾ?’ ಎಂದು ಕೇಳಿದಾಗ, ‘ಇದು ಫಾರಿನ್ ಸ್ಟೈಲ್, ಸುಮ್ಮನಿರು’ ಎಂದು ನಂಬಿಸಿದ್ದಾಳೆ.

ಕಿರಣ್ ಕೈಕಾಲು ಬಿಡಿಸಿಕೊಳ್ಳಲಾಗದೇ ಸಂಪೂರ್ಣ ಅಸಹಾಯಕನಾದ ಮೇಲೆ ಆಕೆ ಆತನ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾಳೆ. ಬೆಂಕಿಯ ಜ್ವಾಲೆಯಿಂದ ತಪ್ಪಿಸಿಕೊಳ್ಳಲಾಗದೆ ಕಿರಣ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈ ಭೀಕರ ಕೃತ್ಯ ನಡೆಯುವ ದೃಶ್ಯವನ್ನು ಯುವತಿ ತನ್ನ ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾಳೆ ಎಂದೂ ಹೇಳಲಾಗಿದೆ.



[ad_2]

Source link

Leave a Reply

Your email address will not be published. Required fields are marked *