Advertisement

SSLC ಯಲ್ಲಿ ಹಿಂದಿ ವಿಷಯಕ್ಕೆ ಗ್ರೇಡ್ ಬದಲು ಅಂಕ

[ad_1]

SSLC: ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಹಿಂದಿ ಭಾಷೆಗೆ ಗ್ರೇಡ್ ಬದಲು ಅಂಕವನ್ನು ನೀಡಬೇಕೆಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮಹತ್ವದ ಆದೇಶವನ್ನು ನೀಡಿದೆ. ಈ ಬೆನ್ನಲ್ಲೇ ಇದೀಗ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಈ ವರ್ಷ SSLC ಪರೀಕ್ಷೆಯಲ್ಲಿ ಹಿಂದಿ ವಿಷಯಕ್ಕೆ ಗ್ರೇಡ್ ಬದಲು ಅಂಕವನ್ನು ನೀಡಲಾಗುವುದು ಎಂದು ಘೋಷಣೆ ಮಾಡಿದ್ದಾರೆ.

2026ನೇ ಸಾಲಿನ SSLC ಪರೀಕ್ಷೆಯಲ್ಲಿ ಹಿಂದಿ (Hindi) ಸೇರಿದಂತೆ ತೃತೀಯ ಭಾಷೆ ವಿಷಯಗಳಿಗೆ ಅಂಕದ ಬದಲಿಗೆ ಗ್ರೇಡ್ ನೀಡಲಾಗುವುದು ಎಂದು ಕ್ಷಣ ಇಲಾಖೆ ತಿಳಿಸಿತ್ತು. ಈ ಪ್ರಕರಣ ಹೈಕೋರ್ಟ್ ಮೆಟ್ಟಿಲೇರಿತ್ತು. ಇದೀಗ ಈ ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಹಿಂದಿ ಭಾಷೆಗೆ ಗ್ರೇಡ್ ಬದಲು ಅಂಕಗಳನ್ನು ನೀಡಬೇಕೆಂದು ರಾಜ್ಯ ಸರ್ಕಾರಕ್ಕೆ ಮಹತ್ವದ ಆದೇಶ ನೀಡಿದೆ. ಹೈಕೋರ್ಟ್ ಆದೇಶ ಹೊರಬಿದ್ದ ಹಿನ್ನೆಲೆ, ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯೆ ನೀಡಿದ್ದು, ನ್ಯಾಯಾಲಯದ ಆದೇಶವನ್ನು ಗೌರವಿಸುತ್ತೇವೆ. ಅದರಂತೆ ಈ ವರ್ಷ ಅಂಕಗಳನ್ನೇ ನೀಡಲಾಗುವುದು. ಮುಂದಿನ ವರ್ಷ ಗ್ರೇಡ್ ನೀಡುವ ಕುರಿತು ಸರ್ಕಾರ ಮರು ಚಿಂತನೆ ನಡೆಸಿ ನಿರ್ಧರಿಸಲಿದೆ ಎಂದು ಸ್ಪಷ್ಟಪಡಿಸಿದರು.



[ad_2]

Source link

Leave a Reply

Your email address will not be published. Required fields are marked *