[ad_1]
1
CET: 2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಪ್ರಾರಂಭವಾಗಿದ್ದು, ಪರೀಕ್ಷೆ ಬರೆಯಲು ವಿದ್ಯಾರ್ಥಿನಿಯರು ಧರಿಸಿದ್ದ ಮೂಗು ಬೊಟ್ಟಿಗೆ ಪರೀಕ್ಷಾ ಕೇಂದ್ರದ ಸಿಬ್ಬಂದಿ ಗಮ್ ಟೇಪ್ ಅಂಟಿಸಿ ಪರೀಕ್ಷೆ ಬರೆಸಿದ ಘಟನೆ ಚಿಕ್ಕಮಗಳೂರಲ್ಲಿ ಬೆಳಕಿಗೆ ಬಂದಿದೆ.


ಪರೀಕ್ಷಾ ಕೇಂದ್ರಗಳಲ್ಲಿ ಆಭರಣಗಳನ್ನು ಧರಿಸುವುದನ್ನು ನಿಷೇಧಿಸುವ ಕಟ್ಟುನಿಟ್ಟಿನ ಭದ್ರತಾ ನಿಯಮಗಳನ್ನು ಕೈಗೊಳ್ಳಲಾಗಿದೆ. ಮೂಗುತ್ತಿ ಧರಿಸಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಆರಂಭದಲ್ಲಿ ಅವುಗಳನ್ನು ತೆಗೆದುಹಾಕುವಂತೆ ಸೂಚನೆ ನೀಡಲಾಗಿತ್ತು. ಆದ್ರೂ ಆಭರಣ ತೆಗೆಯಲು ಸೂಚಿಸಿದರೂ ಅದನ್ನು ತೆಗೆಯಲ ಸಾಧ್ಯವಾಗದ ವಿದ್ಯಾರ್ಥಿನಿಯರಿಗೆ ಸಿಬ್ಬಂದಿ ತಾತ್ಕಾಲಿಕ ಪರಿಹಾರವಾಗಿ ಟೇಪ್ ಅಂಟಿಸಿರುವುದು ವರದಿಯಾಗಿದೆ.
[ad_2]
Source link

















Leave a Reply