Advertisement

ಸಿಡಿಲು ಬಡಿದು ಬೀದರ್‌ನ ಇಬ್ಬರು ಯುವ ರೈತರು ಬಲಿ

[ad_1]

ಬೀದರ್: ಸಿಡಿಲು ಬಡಿದು ಇಬ್ಬರು ಯುವ ರೈತರು ದಾರುಣವಾಗಿ ಸಾವನ್ನಪ್ಪಿದ ಘಟನೆ ಬೀದರ್ (Bidar) ಜಿಲ್ಲೆಯ ಭಾಲ್ಕಿ (Bhalki) ತಾಲೂಕಿನ ನಾವದಗಿ ಗ್ರಾಮದಲ್ಲಿ ನಡೆದಿದೆ.

ನಾವದಗಿ ಗ್ರಾಮದ ರೇವಣಸಿದ್ದ (28) ಮತ್ತು ಜೇವರ್ಗಿಯ ಯಲ್ಲಾಲಿಂಗ (28) ಸಿಡಿಲಿಗೆ ಬಲಿಯಾದ ದುರ್ದೈವಿ ಯುವಕರಾಗಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಏ.29ರವರೆಗೆ, ಬೆಂಗ್ಳೂರಲ್ಲಿ ಮೇ 5ರವರೆಗೆ ಮಳೆ ಮುನ್ಸೂಚನೆ

ಗುರುವಾರ ಸಂಜೆ (ಏ.23) ಜಮೀನಿನಲ್ಲಿ ಕೃಷಿ ಕೆಲಸ ಮಾಡುತ್ತಿದ್ದಾಗ ಮಳೆ ಶುರುವಾಗಿದೆ. ಹೀಗಾಗಿ ಇಬ್ಬರು ರೈತರು ಜಮೀನಿನಲ್ಲಿದ್ದ ಮಾವಿನ ಮರದ ಕಳಗಡೆ ನಿಂತಿದ್ದರು. ಈ ವೇಳೆ ಮಾವಿನ ಮರಕ್ಕೆ ಸಿಡಿಲು ಅಪ್ಪಳಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಸ್ಥಳಕ್ಕೆ ಖಟಕ್ ಚಿಂಚೋಳಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಖಟಕ್ ಚಿಂಚೋಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.ಇದನ್ನೂ ಓದಿ: ಕಾಫಿನಾಡಲ್ಲೊಂದು ಅಪರೂಪದ ಮದ್ವೆ – ATMನಿಂದ ಲವ್ ಶುರು, ಈಗ ಜಾತಿ ಸಂಕೋಲೆ ಮೀರಿ ಕೈಹಿಡಿದ ಜೋಡಿ

[ad_2]

Source link publictv.in

Leave a Reply

Your email address will not be published. Required fields are marked *