Advertisement

ದೆಹಲಿಯಲ್ಲಿ ಮಲ್ಲಿಕಾರ್ಜುನ್‌ ಖರ್ಗೆ ಭೇಟಿಯಾದ ಡಿಕೆಶಿ

[ad_1]

MALLIKARJUN KHARGE DK SHIVAKUMAR

ನವದೆಹಲಿ: ದೆಹಲಿ ಅಂಗಳದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್‌ (D.K Shivakumar) ಪವರ್ ಕ್ಲೈಮ್ ಕಾರ್ಡ್‌ ಪ್ಲೇ ಮಾಡಿ ಒತ್ತಡ ಹಾಕಲು ಮುಂದಾಗಿದ್ದಾರೆ ಎನ್ನಲಾಗಿದೆ. ಇದೇ ಕಾರಣಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ (Mallikarjun Kharge) ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.

ದಾವಣಗೆರೆ ಉಪ ಚುನಾವಣೆ ಬಳಿಕ ರಾಜ್ಯ ಕಾಂಗ್ರೆಸ್‌ನಲ್ಲಿ ನಾನಾ ಬೆಳವಣಿಗೆಗಳು ನಡೆಯುತ್ತಿವೆ. ಅತ್ತ ಕೆಪಿಸಿಸಿ ಅಧ್ಯಕ್ಷ ಡಿಸಿಎಂ ಡಿ.ಕೆ.ಶಿವಕುಮಾರ್ ದೆಹಲಿಯಲ್ಲಿ ಹೈ ಕಮಾಂಡ್ ನಾಯಕರ ಭೇಟಿಯಾಗಿದ್ದಾರೆ. ಇತ್ತ ಸಿಎಂ ಸಿದ್ದರಾಮಯ್ಯ ಸಹಾ ಆಪ್ತ ಸಚಿವರ ಸಭೆ ನಡೆಸಿದ್ದಾರೆ.

ಚುನಾವಣಾ ಫಲಿತಾಂಶ ಬರುವ ದಿನವಾದ ಮೇ 4 ರವರೆಗೆ ಕಾಯುವುದು ಮತ್ತಷ್ಟು ತಡವಾಗುತ್ತೆ ಎಂಬ ಲೆಕ್ಕಾಚಾರದಲ್ಲಿ ಡಿಕೆಶಿ ಇದ್ದಾರೆ ಎನ್ನಲಾಗಿದೆ. ಇದೇ ಕಾರಣಕ್ಕೆ ಚುನಾವಣೆ ಮುಗಿಯುವ ಮೊದಲೇ ಪವರ್ ಕ್ಲೈಮ್ ಕಾರ್ಡ್ ಪ್ಲೇ ಮಾಡಲು ಮುಂದಾದಂತಿದೆ. ಇನ್ನೂ ಮೇ.4ಕ್ಕೂ ಮುನ್ನ ಸಿಎಂ ಸಿದ್ದರಾಮಯ್ಯ ಅವರ ಜೊತೆ ದೆಹಲಿ ನಾಯಕರು ಚರ್ಚಿಸುವ ಸಾಧ್ಯತೆ ಇದೆ.


[ad_2]

Source link publictv.in

Leave a Reply

Your email address will not be published. Required fields are marked *