Advertisement

ಪ್ಲಾಸ್ಟಿಕ್ ಗೋಡೌನ್‌ನಲ್ಲಿ ಅಗ್ನಿ ಅವಘಡ- ಗೋಡೆ ಹಾರಿ ಜೀವ ಉಳಿಸಿಕೊಂಡ ಬೆಂಗಳೂರಿನ ಪಿಜಿ ಯುವತಿಯರು

[ad_1]

Massive fire breaks out in plastic godown PG girls in Bengaluru save their lives by jumping over wall

ಬೆಂಗಳೂರು: ರಾಜಧಾನಿಯ ನಂದಿನಿ ಲೇಔಟ್‌ನಲ್ಲಿ(Nandini Layout) ತಡರಾತ್ರಿ ಸಂಭವಿಸಿದ ಭೀಕರ ಅಗ್ನಿ(Fire) ಅವಘಡದಲ್ಲಿ ಪ್ಲಾಸ್ಟಿಕ್ ಗೋಡೌನ್‌ವೊಂದು(Plastic Godown) ಸಂಪೂರ್ಣ ಭಸ್ಮವಾಗಿದ್ದು, ಬೆಂಕಿಯ ಕೆನ್ನಾಲಿಗೆ ಪಕ್ಕದ ಲೇಡಿಸ್ ಪಿಜಿಗೂ ಹಬ್ಬಿದ ಪರಿಣಾಮ ಯುವತಿಯರು ಪ್ರಾಣಾಪಾಯದಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.

ನಂದಿನಿ ಲೇಔಟ್ ವ್ಯಾಪ್ತಿಯ ಪ್ಲಾಸ್ಟಿಕ್ ಗೋಡೌನ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಪ್ಲಾಸ್ಟಿಕ್ ವಸ್ತುಗಳಿದ್ದ ಕಾರಣ ಬೆಂಕಿ ಕ್ಷಣಾರ್ಧದಲ್ಲಿ ಅಕ್ಕಪಕ್ಕದ ಮನೆಗಳಿಗೆ ವ್ಯಾಪಿಸಿದೆ. ಬೆಂಕಿಯ ತೀವ್ರತೆಗೆ ಮನೆಯ ಮುಂಭಾಗದ ಮರಗಳು ಹಾಗೂ ಕಬ್ಬಿಣದ ಗೇಟ್‌ಗಳು ಕೂಡ ಹೊತ್ತಿ ಉರಿದಿವೆ.

ಗೋಡೌನ್ ಪಕ್ಕದಲ್ಲೇ ಸುಮಾರು 50 ಯುವತಿಯರು ವಾಸವಿದ್ದ ಲೇಡಿಸ್ ಪಿಜಿ ಇತ್ತು. ಬೆಂಕಿಯ ಕೆನ್ನಾಲಿಗೆ ಮತ್ತು ದಟ್ಟ ಹೊಗೆ ಪಿಜಿಯ ಒಳಗೂ ಆವರಿಸುತ್ತಿದ್ದಂತೆ ಯುವತಿಯರು ತೀವ್ರ ಗಾಬರಿಗೊಂಡಿದ್ದಾರೆ. ಹೊರಗೆ ಬರಲು ದಾರಿಯಿಲ್ಲದೆ ಆತಂಕಗೊಂಡ ಕೆಲ ಯುವತಿಯರು ಮೊದಲ ಮಹಡಿಯಿಂದ ಕೆಳಕ್ಕೆ ಜಿಗಿದಿದ್ದಾರೆ. ಇನ್ನೂ ಕೆಲವರು ಪ್ರಾಣ ಉಳಿಸಿಕೊಳ್ಳಲು ಪಿಜಿಯ ಕಾಂಪೌಂಡ್ ಗೋಡೆ ಹಾರಿ ಹೊರಬಂದಿದ್ದಾರೆ. ಇದನ್ನೂ ಓದಿ: ಅಬ್ಬಬ್ಬಾ.. ಬೆಂಗಳೂರಿನಲ್ಲಿ ಒಂದು ಗುಂಡಿ ಮುಚ್ಚಲು 1 ಲಕ್ಷ!- ಬಯಲಾಯ್ತು ಜಿಬಿಎ ‘ದುಬಾರಿ’ ಗುಂಡಿ ಬಿಸಿನೆಸ್!

Massive fire breaks out in plastic godown PG girls in Bengaluru save their lives by jumping over wall 1

ಗೋಡೆ ಹಾರುವ ಮತ್ತು ಜಿಗಿಯುವ ಸಂದರ್ಭದಲ್ಲಿ ಕೆಲವು ಯುವತಿಯರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು. ಇದನ್ನೂ ಓದಿ: ವಿದ್ಯುತ್ ಗ್ರಾಹಕರಿಗೆ ಗುಡ್‌ನ್ಯೂಸ್ – ಮನೆಯಿಂದಲೇ ಕರೆಂಟ್ ಬಿಲ್‌ನಲ್ಲಿ ಹೆಸರು ಬದಲಾವಣೆಗೆ ಹೊಸ ಲಿಂಕ್ ಬಿಡುಗಡೆ

ಬೆಂಕಿಯ ಆವೇಶಕ್ಕೆ ಇಡೀ ಗೋಡೌನ್ ಸುಟ್ಟು ಕರಕಲಾಗಿದ್ದು, ಸ್ಥಳೀಯ ನಿವಾಸಿಗಳು ತಡರಾತ್ರಿ ಬೆಚ್ಚಿಬಿದ್ದಿದ್ದರು. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ನಂದಿನಿ ಲೇಔಟ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಬೆಂಕಿ ತಗುಲಲು ನಿಖರ ಕಾರಣವೇನು ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಗೋಡೌನ್‌ನಲ್ಲಿ ಸಂಭವಿಸಿದ ಬೆಂಕಿ ಅವಘಡದ ಬೆನ್ನಲ್ಲೇ ಈಗ ಮಾಲೀಕ ಮತ್ತು ಸ್ಥಳೀಯ ನಿವಾಸಿಗಳ ನಡುವೆ ಭಾರೀ ಗಲಾಟೆ ಶುರುವಾಗಿದೆ. ಬೆಂಕಿಯ ಅಬ್ಬರಕ್ಕೆ ತಮ್ಮ ಆಸ್ತಿಪಾಸ್ತಿ ಕಳೆದುಕೊಂಡ ಅಕ್ಕಪಕ್ಕದ ನಿವಾಸಿಗಳು ಗೋಡೌನ್ ಮಾಲೀಕನ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಬೆಂಕಿ ಮನೆಗಳಿಗೆ ಆವರಿಸಿದ್ದರಿಂದ ಗೇಟ್, ಕಿಟಕಿ ಹಾಗೂ ಮನೆಯ ಮುಂಭಾಗದ ವಸ್ತುಗಳು ಸುಟ್ಟು ಕರಕಲಾಗಿವೆ. “ನಿಮ್ಮ ಬೇಜವಾಬ್ದಾರಿಯಿಂದ ನಮ್ಮ ಮನೆಗಳಿಗೆ ಹಾನಿಯಾಗಿದೆ, ನಮಗೆ ತಕ್ಷಣ ಪರಿಹಾರ ಕೊಡಿಸಿ” ಎಂದು ನಿವಾಸಿಗಳು ಮಾಲೀಕನನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ.

[ad_2]

Source link publictv.in

Leave a Reply

Your email address will not be published. Required fields are marked *